ಕೊನೆಗೂ ನಟಿ ಸಂಜನಾಗೆ ಜಾಮೀನು ಮಂಜೂರು

ಬೆಂಗಳೂರು: ಸ್ಯಾಂಡಲ್‌ವುಡ್  ಡ್ರಗ್ಸ್ ಜಾಲದ ನಂಟಿನ ಆರೋಪದಲ್ಲಿ ಜೈಲು ಪಾಲಾಗಿದ್ದ ನಟಿ ಸಂಜನಾ ಗಲ್ರಾನಿ ಅವರಿಗೆ ಹೈಕೋರ್ಟ್ ಇಂದು ಷರತ್ತಬದ್ಧ ಜಾಮೀನು ಮಂಜೂರು ಮಾಡಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಗಲ್ರಾನಿ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.  

ನಟಿ ಸಂಜನಾ ಅವರ ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾಯಾಲಯದ, ನ್ಯಾಯಮೂರ್ತಿಗಳಾದ ನಿವಾಸ್ ಹರೀಶ್ ಕುಮಾರ್ ಜಾಮೀನು ಮಂಜೂರು ಮಾಡಿದ್ದು, ಷರತ್ತುಗಳನ್ನು ವಿಧಿಸಿ ತೀರ್ಪು ನೀಡಿದ್ದಾರೆ. ಈ ವೇಳೆ ನ್ಯಾಯಾಲಯ, ರೂ. 3 ಲಕ್ಷ ಮೊತ್ತಕ್ಕೆ ವೈಯಕ್ತಿಕ ಬಾಂಡ್ ಮತ್ತು ಇಬ್ಬರ ಶ್ಯೂರಿಟಿ ಒದಗಿಸಬೇಕು, ಎಂದು ಹೇಳಿದ್ದು. ಪ್ರತಿ ತಿಂಗಳು ಎರಡು ಬಾರಿ ಠಾಣೆಗೆ ಹಾಜರಾಗಬೇಕು ಹಾಗೂ ತನಿಖೆಗೆ ಸಹಕರಿಸಬೇಕು ಎಂದು ತಿಳಿಸಿದೆ. ಇದರೊಂದಿಗೆ, ತನಿಖೆಗೆ ಸಹಕಾರ ನೀಡಿ, ಸಾಕ್ಷ್ಯಗಳನ್ನು ತಿರುಚದಂತೆ ನ್ಯಾಯಾಲಯ ನಿರ್ದೇಶನ ನೀಡಿದೆ.

ಸೆಪ್ಟೆಂಬರ್ 8 ರಂದು ಸಂಜನಾ ಗಲ್ರಾನಿ ಮನೆ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಸಂಜನಾ ಗಲ್ರಾನಿಯನ್ನು ವಿಚಾರಣೆಗೆ ಕರೆದು, ನಂತರ ಬಂಧಿಸಿದ್ದರು.

Leave a Reply

Your email address will not be published. Required fields are marked *

error: Content is protected !!