ಉಡುಪಿ ಅಗ್ನಿಶಾಮಕ ದಳದ ಸತೀಶ್‌ಗೆ ಕೇಂದ್ರ ಗೃಹ ಮಂತ್ರಾಲಯದ ಪದಕ
ಉಡುಪಿ, ಫೆ.21: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಅಗ್ನಿಶಾಮಕರಾಗಿ ಕರ್ತವ್ಯ ನಿರ್ವಸುತ್ತಿರುವ ಸತೀಶ್ ಅವರಿಗೆ, ಇಲಾಖೆಯು ಉತ್ತಮ ಹಾಗೂ ನಿಷ್ಠೆಯ ಸೇವೆಗಾಗಿ, ತುರ್ತು ಪರಿಸ್ಥಿತಿಯಲ್ಲಿ ಶ್ರೇಷ್ಠ ಕಾರ್ಯಕ್ಕಾಗಿ ಕೇಂದ್ರ ಸರಕಾರದ ಗೃಹ ಮಂತ್ರಾಲಯವು ನೀಡುವ ಪ್ರಶಸ್ತಿಯನ್ನು ಪಡೆದಿದ್ದಾರೆ.
ಸತೀಶ್ ಅವರು ಈ ಪದಕವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾನಿರ್ದೇಶಕರ ಉಪಸ್ಥಿತಿಯಲ್ಲಿ ಇತ್ತೀಚೆಗೆ ಪಡೆದಿದ್ದಾರೆ.
2005ರಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಸೇರ್ಪಡೆಗೊಂಡು ಆರ್.ಎ. ಮುಂಡ್ಕೂರ್ ತರಬೇತಿ ವಿದ್ಯಾಲಯ ದಲ್ಲಿ ತರಬೇತಿ ಪಡೆದು 2006ರಲ್ಲಿ ಮೂಡಬಿದ್ರೆ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯಕ್ಕೆ ಸೇರ್ವಡೆಗೊಂಡರು. 2018ರಲ್ಲಿ ಮೈಸೂರು ಹೆಬ್ಬಾಳ ಅಗ್ನಿಶಾಮಕ ಠಾಣೆಗೆ ಪದೋನ್ನತಿ ವರ್ಗಾವಣೆ ಪಡೆದು ಪ್ರಸ್ತುತ ಉಡುಪಿ ಅಗ್ನಿಶಾಮಕ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಮ್ಮ ಕರ್ತವ್ಯದ ಅವಧಿಯಲ್ಲಿ ಜನರ ಪ್ರಾಣ ಹಾಗೂ ಆಸ್ತಿಗಳ ರಕ್ಷಣೆಗಾಗಿ ಹಲವು ಪುರಸ್ಕಾರಗಳು ಹಾಗೂ ಸೆಲ್ಯೂಟ್‌ದ ಸೈಲೆಂಟ್ ಸ್ಟಾರ್ ಪ್ರಶಸ್ತಿಯನ್ನು ಪಡೆದಿದ್ದಾರೆ ಎಂದು ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.





