ಫೆ.25: ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವ: ಕಿಸಾನ್ ಸಭಾಸಭಾಂಗಣ ಉದ್ಘಾಟನೆ- ಸಿಎಂ ಭಾಗಿ

ಉಡುಪಿ: ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ನಿರ್ಮಿಸಲಾದ ‘ಕಿಸಾನ್ ಸಭಾ’ ಸಭಾಂಗಣದ ಉದ್ಘಾಟನೆ ಹಾಗೂ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯ 35ನೇ ವರ್ಷದ ಸಂಭ್ರಮೋತ್ಸವ ಇದೇ ಫೆ. 25ರಂದು ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯಿಲಿ ತಿಳಿಸಿದರು.ಕಾರ್ಕಳದ ಕುಕ್ಕುಂದೂರಿನ ಮಹಾತ್ಮಗಾಂಧಿ ವಸತಿ ಪ್ರೌಢಶಾಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೈಕ್ಷಣಿಕವಾಗಿ ಹಿಂದುಳಿದ ಗ್ರಾಮೀಣ ಮಕ್ಕಳಿಗೆ ಉಚಿತ ಊಟ, ವಸತಿ ಮತ್ತು ಶಿಕ್ಷಣ ನೀಡುವುದು ಈ ಸಂಸ್ಥೆಯ ಮುಖ್ಯ ಉದ್ದೇಶ. ಪ್ರಸ್ತುತ ವಸತಿ ಶಾಲೆಯಲ್ಲಿ ಎಲ್ಲ ವರ್ಗದ 103 ಬಡ ವಿದ್ಯಾರ್ಥಿಗಳು ಯಾವುದೇ ಶುಲ್ಕವಿಲ್ಲದೆ ಗುಣಮಟ್ಟದ ಶಿಕ್ಷಣ ಪಡೆಯುತ್ತಿದ್ದಾರೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆ. 25ರಂದು ಬೆಳಿಗ್ಗೆ 11.30ಕ್ಕೆ ಕಾಬೆಟ್ಟಿನ ಡಾ। ಬಿ.ಆರ್ ಅಂಬೇಡ್ಕರ್ ಭವನ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದು, ಆ ಬಳಿಕ ತಾಲ್ಲೂಕು ಕಚೇರಿ ರಸ್ತೆಯಲ್ಲಿರುವ ನೂತನ ‘ಕಿಸಾನ್ ಸಭಾ’ ಸಭಾಂಗಣ ಲೋಕಾರ್ಪಣೆ ಗೊಳಿಸಲಿದ್ದಾರೆ. ಆ ನಂತರ ಕುಕ್ಕುಂದೂರಿನ ನಿಟ್ಟೆ ವಿನಯ ಹೆಗ್ಡೆ ಬಯಲು ರಂಗಮಂದಿರದಲ್ಲಿ ನಡೆಯುವ ಶಾಲೆಯ 35ನೇ ವರ್ಷದ ಸಂಭ್ರಮಾಚರಣೆಯಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ‌ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌. ಸಿ.ಮಹಾದೇವಪ್ಪ, ವಿ.ಸುನಿಲ್ ಕುಮಾರ್, ಎಸ್‌ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ। ಎಂ.ಎನ್‌.ರಾಜೇಂದ್ರ ಕುಮಾರ್‌ ,ಕಾಂಗ್ರೆಸ್‌ ನಾಯಕ ಮುನಿಯಾಲು ಉದಯ್‌ಶೆಟ್ಟಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್‌ ಪೂಜಾರಿ, ಕಿಸಾನ್‌ ಸಭಾ ಟ್ರಸ್ಟ್‌ ಅಧ್ಯಕ್ಷ ಹರ್ಷ ಮೊಯ್ಲಿ, ಕಾಂಗ್ರೆಸ್‌ ಮುಖಂಡ ಮುನಿಯಾಲು ಉದಯ್‌ ಶೆಟ್ಟಿ,ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭಧ ರಾವ್‌, ಪ್ರಮುಖರಾದ ಬಿ. ಭಾಸ್ಕರ್ ರಾವ್, ರವಿಕಿರಣ್ ಜೈನ್,ನೀರೆ ಕೃಷ್ಣ ಶೆಟ್ಟಿ, ಬಜಗೋಳಿ ಉಮೇಶ್ ರಾವ್, ಅಶೋಕ್ ಕುಮಾರ್ ಜೈನ್, ಎಂ.ಸಿ. ಆಚಾರ್, ಕಿಸಾನ್‌ ಸಭಾ ಟ್ರಸ್ಟ್‌ನ ಬಿ. ಕೃಷ್ಣಮೂರ್ತಿ, ಹೆಬ್ರಿ ಎಸ್.ಆರ್. ಕಾಲೇಜಿನ ನಾಗರಾಜ ಶೆಟ್ಟಿ ಇದ್ದರು.

Leave a Reply

Your email address will not be published. Required fields are marked *

error: Content is protected !!