ಹಿರಿಯ ಪತ್ರಕರ್ತ, ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ ಆತ್ಮಹತ್ಯೆ
ಬ್ರಹ್ಮಾವರ: ಹಿರಿಯ ಪತ್ರಕರ್ತ, ಬ್ರಹ್ಮಾವರದ ಖಾಸಗಿ ಕಾಲೇಜಿನ ಉಪಪ್ರಾಂಶುಪಾಲ ಶೇಷಗಿರಿ ಭಟ್ (45) ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಬ್ರಹ್ಮಾವರ ಕ್ರಾಸ್‌ಲ್ಯಾಂಡ್ ಕಾಲೇಜಿನ ಉಪಪ್ರಾಂಶುಪಾಲ, ಪ್ರಜಾವಾಣಿ ಪತ್ರಿಕೆಯ ಬ್ರಹ್ಮಾವರ ವ್ಯಾಪ್ತಿಯ ಬಿಡಿವರದಿಗಾರ, ಆರೂರು ನಿವಾಸಿ ಶೇಷಗಿರಿ ಭಟ್ ಅವರು ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಖಿನ್ನತೆಯಿಂದ ಇದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಸ್ಪಷ್ಟ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.





