ಉಡುಪಿ: ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಉಡುಪಿ, ಮಾ.4: ವೈಯಕ್ತಿಕ ಕಾರಣದಿಂದ ಮನನೊಂದ ನರ್ಸಿಂಗ್ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.

ಕಡಬ ರೆಂಜಿಲಾಡಿಯ ಲಾರೆನ್ಸ್ ಎಂಬವರ ಮಗಳು ಸ್ವೀಟಿ(18) ಎಂದು ಗುರುತಿಸಲಾಗಿದೆ. ಇವರು ಉಡುಪಿಯ ನರ್ಸಿಂಗ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಸ್ಪತ್ರೆಯ ವಸತಿ ನಿಲಯದಲ್ಲಿ ತರಗತಿ ಮುಗಿದ ನಂತರ ಉಳಿದುಕೊಳ್ಳುತ್ತಿದ್ದರು.

ಫೆ.25ರಂದು ರಾತ್ರಿ ವಸತಿ ನಿಲಯದಲ್ಲಿರುವಾಗ ಇಲಿ ಪಾಷಣಾ ಸೇವನೆ ಮಾಡಿದ್ದು, ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ವರ್ಗಾ ಯಿಸಲಾಯಿತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಅವರು, ಮಾ.3ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!