ದೇಶದ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ- ಹರಿಪ್ರಸಾದ್ ರೈ

ಉಡುಪಿ: ಭಾರತ ಸರಕಾರದ ಮಿನಿಸ್ಟ್ರಿ ಆಫ್ ಯೂತ್ ಅಫೈರ್ಸ್ ಅಂಡ್ ಸ್ಪೋರ್ಟ್ಸ್, ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ, ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್, ಅಸ್ಮಿತಾ ಹಾಗೂ ಖೇಲೋ ಇಂಡಿಯಾ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಕ್ರೀಡಾಕೂಟವನ್ನು ರವಿವಾರ ಉಡುಪಿ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಹರಿಪ್ರಸಾದ್ ರೈ ಮಾತನಾಡಿ, ಮಹಿಳೆಯರು ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ರಾಜ್ಯ, ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕು. ದೇಶದ ಅಭಿವೃದ್ಧಿ ಹಾಗೂ ಪ್ರಗತಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಉಡುಪಿ ಯುವಜನ ಸೇವಾ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ವಂದಿಸಿದರು. ಜೊತೆ ಕಾರ್ಯದರ್ಶಿ ಸುದರ್ಶನ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!