ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಗ್ ಶಾಕ್..!

ಬೆಂಗಳೂರು: ಮುಷ್ಕರ ನಡೆಸುತ್ತಿರುವ ಸಾರಿಗೆ ನೌಕರರಿಗೆ ರಾಜ್ಯ ಸರಕಾರ ಒಂದು ದೊಡ್ಡ ಶಾಕ್ ನೀಡಲು ಮುಂದಾಗಿದೆ. ಒಂದು ವೇಳೆ ಮುಷ್ಕರ ನಿರತ ಸಾಗಿಗೆ ನೌಕರರುನಾಳೆಯೊಳಗೆ ಕೆಲಸಕ್ಕೆ ಹಾಜರಾಗದೇ ಹೋದರೆ ಸರಕಾರ ಎಸ್ಮಾ ಕಾಯ್ದೆ ಜಾರಿಗೆ ತರಲು ಮುಂದಾಗಿದೆ ಎನ್ನಲಾಗುತ್ತಿದೆ. ಈಗಾಗಲೇ ಸರಕಾರ ಆರ್ಥಿಕ ಸಂಕಷ್ಟದಲ್ಲಿದ್ದು, ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಸಮಯವಕಾಶ ಬೇಕಾಗುತ್ತದೆ. ಆದ್ದರಿಂದ ಮುಷ್ಕರವನ್ನು ಕೈಬಿಡಿ ಎಂದು ಮುಖ್ಯಮಂತ್ರಿ ಬಿಸ್ ಯಡಿಯೂರಪ್ಪ ಅವರು ಸಾರಿಗೆ ನೌಕರರಲ್ಲಿ ಮನವಿ ಮಾಡಿಕೊಂಡಿದ್ದರು. ಈ ನಡುವೆ ನೌಕರರು ಕರ್ತವ್ಯಕ್ಕೆ ಹಾಜರಾಗದೇ ಹೋದರೆ ಏಸ್ಮಾ ಕಾಯ್ದೆಯನ್ನು ಜಾರಿಗೆ ತರಲಾಗುತ್ತದೆ ಎನ್ನಲಾದ ಸುದ್ಧಿಯೊಂದು ವರದಿಯಾಗಿದೆ.

ಹಾಗಾದರೆ ಎಸ್ಮಾ ಎಂದರೇನು…?
ಏಸ್ಮಾ(ಇಎಸ್‌ಎಮ್‌ಎ) ಅಂದರೆ ಅಗತ್ಯ ಸೇವೆ ನಿರ್ವಹಣೆ ಕಾಯಿದೆ. ಇದು ಕೆಲವು ಸೇವೆಗಳ ವಿತರಣೆಯನ್ನು ಖಚಿತಪಡಿಸಿಕೊಳ್ಳಲು ಸ್ಥಾಪಿಸಲಾದ ಭಾರತದ ಸಂಸತ್ತಿನ ಒಂದು ಕಾರ್ಯವಾಗಿದೆ.

ಈ ಏಸ್ಮಾ ಕಾಯ್ದೆಯನ್ನು ಯಾವಾಗ ಜಾರಿ ಮಾಡಲಾಗುತ್ತದೆ..?
ಸರಕಾರಿ ನೌಕರರು ಸಾಮೂಹಿಕ ಪ್ರತಿಭಟನೆಗೆ ಮುಂದಾಗಿ ಪರಿಸ್ಥಿತಿ ಸಂಪೂರ್ಣ ಕೈ ಮೀರಿ ಹೋಗುತ್ತಿದೆ ಎಂಬ ಸಂದರ್ಭದಲ್ಲಿ ಸರಕಾರ ಎಸ್ಮಾ ಕಾಯ್ದೆ ಜಾರಿ ಮಾಡಲು ಮುಂದಾಗುತ್ತದೆ. ಇದರ ಜೊತೆಗೆ, ಮೂಲ ಸರ‍್ಯಗಳಾದ ಆಹಾರ, ಭದ್ರತೆ, ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆಗೆ ಅಡ್ಡಿಯುಂಟು ಮಾಡುವ ಸಂದರ್ಭಗಳು ಕೂಡಾ ಹೆಚ್ಚಿದೆ ಎಂದದಾಗ ಕೂಡಾ ಸರಕಾರ ಈ ಎಸ್ಮಾ ಕಾಯ್ದೆಯನ್ನು ಜಾರಿ ಮಾಡಲು ಮುಂದಾಗುತ್ತದೆ.

ಎಸ್ಮಾ ಕಾಯ್ದೆಯನ್ನು ಜಾರಿ ಮಾಡುವುದರಿಂದಾಗುವ ಪರಿಣಾಮ ಏನು…?
ಒಂದರ್ಥದಲ್ಲಿ ಎಸ್ಮಾ ಎಂದರೆ `ಕಡ್ಡಾಯ ಕೆಲಸ’. ಸಂವಿಧಾನ ಅನುಸೂಚಿ ೭ ರಲ್ಲಿನ ೨ನೇ ಪಟ್ಟಿಯಲ್ಲಿರುವ `ಸಾರ್ವಜನಿಕ ಸುವ್ಯವಸ್ಥೆ’ ಮತ್ತು ‘ಪೊಲೀಸ್’ ಸಂಬಂಧಿಸಿದ ಎಲ್ಲಾ ಸೇವೆಗಳ ಕುರಿತು ರಾಜ್ಯ ಶಾಸಕಾಂಗವು ಕಾನೂನು ರೂಪಿಸುವ ಅಧಿಕಾರ ಹೊಂದಿರುತ್ತದೆ. ಅದರಂತೆ ಎಸ್ಮಾ ಕಾಯ್ದೆ ಉಲ್ಲಂಘನೆ ಮಾಡಿದರೆ ಕಾಯ್ದೆ ಉಲ್ಲಂಘಿಸಿದವರನ್ನು ವಾರಂಟ್ ಇಲ್ಲದೇ ಬಂಧನ ಮಾಡಬಹುದಾಗಿದೆ. ಅಲ್ಲದೆ ಆರು ತಿಂಗಳು ಜೈಲು ವಾಸ ಸಾಧ್ಯತೆಯೂ ಇರುತ್ತದೆ. ಎಸ್ಮಾ ಜಾರಿಯಾದ ಮೇಲೂ ಉದ್ಯೋಗಿ ಪ್ರತಿಭಟನೆಯಲ್ಲಿ ಪಾಲ್ಗೊಂಡರೆ ಆತನ ವೇತನ, ಭತ್ಯೆ, ಬಡ್ತಿ ಮತ್ತು ಇತರ ಸವಲತ್ತುಗಳ ಮೇಲೆ ಕಾಯ್ದೆಯಿಂದ ಪರಿಣಾಮ ಉಂಟಾಗುವ ಸಾಧ್ಯತೆಯೂ ಇರುತ್ತದೆ.

Leave a Reply

Your email address will not be published. Required fields are marked *

error: Content is protected !!