ಮಂಗಳೂರು: ಚಲಿಸುತ್ತಿದ್ದ ಕಾರಿಗೆ ಬೆಂಕಿ – ನಾಲ್ವರು ಪಾರು

ಮಂಗಳೂರು: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕವಾಗಿ ಹತ್ತಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಿವಿಎಸ್ ವೃತ್ತದ ಬಳಿ ಇಂದು ಮಧ್ಯಾಹ್ನ ನಡೆದಿದೆ.

ಘಟನೆ ವೇಳೆ ಕಾರಿನಲ್ಲಿ ಚಾಲಕ ಸೇರಿ ಇತರ ಮೂವರು ಮಹಿಳೆಯರು ಇದ್ದರು. ಅದೃಷ್ಟಾವಶಾತ್ ಕಾರಿನಲ್ಲಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.

ಕೋಡಿಯಾಲ್‌ಬೈಲ್ ಕಡೆಯಿಂದ ಬಂದ ಕಾರು ಪಿವಿಎಸ್ ಸರ್ಕಲ್ ತಲುಪುತ್ತಿದ್ದಂತೆಯೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಚಾಲಕ ಕಾರು ನಿಲ್ಲಿಸಿದ್ದು ಕಾರಿಲ್ಲಿದ್ದ ಎಲ್ಲರೂ ಕ್ಷಣಾರ್ಧದಲ್ಲಿ ಹೊರ ಬಂದು ಪಾರಾಗಿದ್ದಾರೆ. 

ಸ್ಥಳಕ್ಕೆ ಸಂಚಾರ ಪೊಲೀಸರು, ಅಗ್ನಿ ಶಾಮಕ ದಳದ ಸಿಬ್ಬಂಧಿಗಳು ಭೇಟಿ ನೀಡಿ ಸಾರ್ವಜನಿಕರ ಸಹಾಯದಿಂದ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಿಂದ ಕಾರು ಭಾಗಶಃ ಸುಟ್ಟು ಕರಕಲಾಗಿದೆ.

Leave a Reply

Your email address will not be published. Required fields are marked *

error: Content is protected !!