ಉದ್ಯಾವರ: ಕೊಡಪಾನದಲ್ಲಿ ತಲೆ ಸಿಲುಕಿಕೊಂಡು ನಾಯಿಯ ರಕ್ಷಣೆ

ಉದ್ಯಾವರ: ಕೊಡಪಾನದಲ್ಲಿ ತಲೆ ಸಿಲುಕಿಕೊಂಡು ಒದ್ದಾಡುತ್ತಿದ್ದ ನಾಯಿಯನ್ನು ರಕ್ಷಿಸಿದ ಘಟನೆ ಉದ್ಯಾವರ ಶ್ರೀ ಶಂಭುಶೈಲೇಶ್ವರ ದೇಗುಲದ ಅರ್ಚಕರ ಮನೆಯ ಬಳಿಯಲ್ಲಿ ನಡೆದಿದೆ. 

ಬೀದಿ ನಾಯಿಯೊಂದು ಅಲ್ಯುಮೀನಿಯಂ ಕೊಡಪಾನದಲ್ಲಿ ಮೂಗು ತೂರಿಸಲು ಹೋಗಿ ತಲೆಯೇ ಸಿಲುಕಿಸಿಕೊಂಡು ಅಪಾಯಕಾರಿಯಾದ ಪರಿಸ್ಥಿತಿಯಲ್ಲಿ ಕಂಡು ಬಂದಿತ್ತು. ಶ್ವಾನದ ಈ ದುಸ್ಥಿಯನ್ನು ಕಂಡು, ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಅರ್ಚಕ ಗಣಪತಿ ಆಚಾರ್ಯ ಅವರು, ಕೂಡಲೇ ಸ್ಥಳೀಯರ ಸಹಕಾರವನ್ನು ಯಾಚಿಸಿದ್ದರು.

ಈ ವೇಳೆ  ಸೋಮನಾಥ ಉದ್ಯಾವರ, ರಾಕೇಶ್ ಉದ್ಯಾವರ ಮತ್ತಿತರರು ಬಂದು ಸುಮಾರು ಒಂದು ಗಂಟೆಗೂ ಅಧಿಕ ಕಾಲ ಹರಸಾಹಸ ಪಟ್ಟು,  ಬಳಿಕ ಕೊಡಪಾನದ ಬಾಯಿಯನ್ನು ತುಂಡರಿಸಿ ನಾಯಿಯನ್ನು ಸ್ವತಂತ್ರಗೊಳಿಸಿದರು.

Leave a Reply

Your email address will not be published. Required fields are marked *

error: Content is protected !!