ದ್ವಿತೀಯ ಪಿಯುಸಿ ಫಲಿತಾಂಶ- ವಾಣಿಜ್ಯ‌ ವಿಭಾಗದಲ್ಲಿ ದ.ಕ ಜಿಲ್ಲೆಯ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ

ಬೆಂಗಳೂರು: ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿರುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಫಲಿತಾಂಶದಲ್ಲಿ ಈ ಬಾರಿ ದಾಖಲೆಯ ಹೆಚ್ಚಳವಾಗಿದೆ.

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದು, ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.

ಈ ವರ್ಷ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ.

ವಾಣಿಜ್ಯ‌ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ 600 ಅಂಕಗಳಿಗೆ 600 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಈ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶವನ್ನು ನೋಡಲು ಅಧಿಕೃತ ವೆಬ್‌ಸೈಟ್‌ https://karresults.nic.in ಜಾಲತಾಣ ಹಾಗೂ ಕರ್ನಾಟಕ ಒನ್ ಮೊಬೈಲ್ ಆ್ಯಪ್ ಮೂಲಕ ಫಲಿತಾಂಶ ಪಡೆಯಬಹುದು.

ಈ ಬಾರಿ ಡಿಜಿಲಾಕರ್‌ನಲ್ಲೂ ಫಲಿತಾಂಶ ಲಭ್ಯ

ಇದೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯು ಡಿಜಿಲಾಕರ್ ಮೂಲಕ ಲಭ್ಯವಾಗಲಿದೆ. ಒಂದು ವೇಳೆ ವೆಬ್​​ಸೈಟ್​​ನಲ್ಲಿ ರಿಸಲ್ಟ್ ನೋಡುವಾಗ ಸರ್ವರ್ ಸಮಸ್ಯೆ ಎದುರಾದರೆ ಡಿಜಿಲಾಕರ್ ಮೂಲಕವೇ ಮಾರ್ಕ್ಸ್ ಕಾರ್ಡ್ ಪಡೆದುಕೊಳ್ಳಬಹುದು.

ಉಡುಪಿ ಜಿಲ್ಲೆಯ ಪ್ರತಿಷ್ಠಿತ ಜ್ಞಾನಸುಧಾ ಕಾಲೇಜಿನ ಟಾಪರ್ಸ್

ವಿಜ್ಞಾನ ವಿಭಾಗದ ಟಾಪರ್ಸ್ 
1. ಚೈತ್ರಿಕಾ ಚೌದರಿ - 597 (ಕೆಜೆಎಸ್)
2. ವೈಷ್ಣವಿ ಕುಲಕರ್ಣಿ - 597 (ಕೆಜೆಎಸ್)
3. ಅರ್ನವಿ - 597 (ಯುಜೆಎಸ್)

ವಾಣಿಜ್ಯ ಟಾಪ್ಪರ್ಸ್
1. ಶಾನ್ವಿ ದಿನೇಶ್ - 595 (ಕೆಜೆಎಸ್)
2. ಚಾನ್ವಿ - 593 (ಕೆಜೆಎಸ್)
3. ಪ್ರತುಲ್ ಡಿ- 592 (ಕೆಜೆಎಸ್)
4. ರಕ್ಷಿತ್ -592 (MJS)
5.ಸಜನ್ - 591 (MJS)

Leave a Reply

Your email address will not be published. Required fields are marked *

error: Content is protected !!