ಉಡುಪಿ: ಹಿರಿಯ ಪತ್ರಕರ್ತ ಗಣೇಶ್ ಪ್ರಭು ಇನ್ನಿಲ್ಲ
ಉಡುಪಿ: ಹಿರಿಯ ಪತ್ರಕರ್ತ ಗಣೇಶ ಪ್ರಭು (61) ಇಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ
ದಿ ಹಿಂದೂ ಪತ್ರಿಕೆಯ ಉಡುಪಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದ ಇವರು, ಕಳೆದ ಐದು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಬಳಿಕ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಿದ್ದರು. ಬಳಿಕ ಆರೋಗ್ಯ ಸಮಸ್ಯೆಯಿಂದ ಉಡುಪಿಯಲ್ಲಿ ನೆಲೆಸಿದ್ದರು.
ಬ್ರಹ್ಮಾವರ ಎಸ್.ಎಮ್.ಎಸ್ ಕಾಲೇಜಿನಲ್ಲಿ ಹಲವು ವರ್ಷಗಳ ಪ್ರಾಧ್ಯಾಪಕರಾಗಿಯೂ,ಮಾರ್ನಿಂಗ್ ನ್ಯೂಸ್ ಡೈಲಿ ಆಂಗ್ಲ ಪತ್ರಿಕೆಯಲ್ಲಿ ದುಡಿದ್ದರು.
ಮೃತರು ಪತ್ನಿ, ಓರ್ವ ಪುತ್ರಿ,ಸಹೋದರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.





