ಮಣಿಪಾಲ: ಬಸ್ ನಿಲ್ದಾಣಕ್ಕೆ ಕಾರು ಢಿಕ್ಕಿ- ಓರ್ವ ಮೃತ್ಯು

ಮಣಿಪಾಲ: ಕಾರೊಂದು ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಇನ್ನೋರ್ವ ತೀವ್ರವಾಗಿ ಗಾಯಗೊಂಡ ಘಟನೆ ಮಣಿಪಾಲ ಟೈಗರ್ ಸರ್ಕಲ್ ಬಳಿ ಎ.20ರಂದು ತಡರಾತ್ರಿ ವೇಳೆ ನಡೆದಿದೆ.

ಮೃತರನ್ನು ಕಾರ್ತಿಕೇಯ್ ಶರ್ಮಾ(21) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಹೆರ್ಶ್ ಹಾರ್ಡಿಂಗ್ ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಣಿಪಾಲ ಈಶ್ವರ ನಗರದಿಂದ ಸಿಂಡಿಕೇಟ್ ಸರ್ಕಲ್ ಕಡೆಗೆ ಅತೀವೇಗದಿಂದ ಚಲಾಯಿಸಿಕೊಂಡು ಬಂದ ಕಾರು, ಮಣಿಪಾಲ ಬಸ್ ನಿಲ್ದಾಣಕ್ಕೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಕಾರು ರಸ್ತೆಗೆ ಬಿದ್ದು ಚಾಲಕ ಕಾರ್ತಿಕೇಯ್ ಶರ್ಮಾ ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!