ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಶಾಲೆಗೆ ಪ್ರವೇಶಾತಿ ಪಡೆದು ಹಿಂದಿರುಗುತ್ತಿದ್ದ ಬಾಲಕಿ ಮೃತ್ಯು

ಉಡುಪಿ: ಕಾಪು ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಡಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಬಂದಿದ್ದ ಬಾಲಕಿ ಸಾತ್ವಿ ಶೆಟ್ಟಿ (8) ತೀವ್ರಗಾಯಗಳೊಂದಿಗೆ ಸಾವನ್ನಪ್ಪಿದ್ದಾಳೆ.

ಮೃತ ಸಾತ್ವಿ ತನ್ನ ತಂದೆ ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾಳೆ. ದುಬಾಯಿಯಲ್ಲಿ ವಾಸವಿದ್ದ ಈ ಕುಟುಂಬವು ಮುಂದೆ ಊರಿನಲ್ಲಿಯೇ ನೆಲೆಸುವ ಸಿದ್ಧತೆಯಲ್ಲಿತ್ತು. ಸಾತ್ವಿಗಾಗಿ ಆಕೆಯ ಹೆತ್ತವರು ಉಡುಪಿಯ ಖಾಸಗಿ ಶಾಲೆಯಲ್ಲಿ ಪ್ರವೇಶಾತಿಯನ್ನೂ ಮುಗಿಸಿದ್ದರು. ನಾಳೆ ಆಕೆಯ ತಂದೆ ನಿತ್ಯಾನಂದ ಶೆಟ್ಟಿ ಅವರು ಮಾತ್ರ ದುಬಾಯಿಗೆ ತೆರಳುವವರಿದ್ದು, ಕಾಪು ಪೇಟೆಗೆ ಏನನ್ನೋ ತರಲು ಹೋಗಿ ವಾಪಾಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ತಾಣಕ್ಕೂ ಅವರ ಪೂವಣಿಗುತ್ತು ಮನೆಗೂ ಕೇವಲ ಅರ್ಧ ಕಿ.ಮೀ. ದೂರವಷ್ಟೇ ಬಾಕಿ ಇತ್ತು. ಸ್ಕೂಟಿ ಸವಾರ ನಿತ್ಯಾನಂದ ಶೆಟ್ಟಿ ಅವರಿಗೂ ಗಾಯಗಳಾಗಿವೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!