ಕಾರ್ಕಳ: ಬೈಕ್ ಗೆ ಕಾರು ಡಿಕ್ಕಿ, ಸವಾರ ಮೃತ್ಯು

ಕಾರ್ಕಳ: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮರ್ಣೆ ಎಂಬಲ್ಲಿ ನಡೆದಿದೆ. ಮೃತ ಯುವಕ ಮಂಜುನಾಥ(32) ಎಂದು ಗುರುತಿಸಲಾಗಿದೆ.

ಮಂಜುನಾಥ್ ತನ್ನ ಬೈಕ್‌ನಲ್ಲಿ ಅಜೆಕಾರ್ ಕಡೆಹೋಗುತ್ತಿದ್ದಾಗ ಎಣ್ಣೆಹೊಳೆಯಿಂದ ಅಜೆಕಾರ್ ಕಡೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮಂಜುನಾಥ್ ಕಾರ್ಕಳ ಹೊಟೇಲ್‌ನಲ್ಲಿ ಉದ್ಯೋಗಿಯಾಗಿದ್ದ ಎಂದು ತಿಳಿದು ಬಂದಿದೆ.

ಕಾರು ಚಾಲಕನ ಅತಿಯಾದ ವೇಗವೇ ಘಟನೆಗೆ ಕಾರಣ ಎನ್ನಲಾಗಿದೆ. ಇದರಿಂದಾಗಿ ಬೈಕ್ ಗೆ ಕಾರು ಡಿಕ್ಕಿ ಹೊಡೆದಿದೆ. ಇದರಿನ ರಸ್ತೆಗೆ ಎಸೆಯಲ್ಪಟ್ಟ ಮಂಜುನಾಥ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಜೆಕಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!