ಆದಿವುಡುಪಿ ಆಂಗ್ಲಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ: ಅಮೋಘ್ ಎಸ್.ರಾವ್ ಪ್ರಥಮ
ಉಡುಪಿ: ಆದಿವುಡುಪಿ ಆಂಗ್ಲಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ ಮೊದಲ ಬ್ಯಾಚ್ ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇಕಡಾ 100 ಫಲಿತಾಂಶ ಲಭಿಸಿದೆ.
ಅಮೋಘ್ ಎಸ್. ರಾವ್ ಕಂಬಳಕಟ್ಟ 598 (95.68%) ಅಂಕಗಳನ್ನು ಪಡೆದು, ಪ್ರಥಮ ಸ್ಥಾನ ಪಡೆದಿದ್ದಾನೆ. ಪರೀಕ್ಷೆಗೆ ಹಾಜರಾದ 12 ವಿದ್ಯಾರ್ಥಿಗಳಲ್ಲಿ ಮೂವರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, ಆರು ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಮತ್ತು ಮೂವರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲಾ ಆಡಳಿತ ಮಂಡಳಿ, ಮುಖ್ಯಶಿಕ್ಷಕರು ಹಾಗೂ ಶಿಕ್ಷಕ ವೃಂದದವರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.





