ಮರವಂತೆ: ಕಾಲೇಜ್ ವಿದ್ಯಾರ್ಥಿಗಳಿದ್ದ ಬಸ್ ಟ್ಯಾಂಕರ್ ಮತ್ತು ಲಾರಿಗೆ ಡಿಕ್ಕಿ- ಇಬ್ಬರು ಮೃತ್ಯು, ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಉಡುಪಿ: ಕಾಲೇಜು ಪ್ರವಾಸ ಹೊರಟಿದ್ದ ಬಸ್ಸೊಂದು ರಸ್ತೆ ಬದಿ ನಿಂತಿದ್ದ ಟ್ಯಾಂಕರ್ ಮತ್ತು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಇಬ್ಬರು ಮೃತಪಟ್ಟ ಘಟನೆ ತ್ರಾಸಿಯ ಮರವಂತೆ ಬೀಚ್ ಬಳಿ ಇಂದು ಮಧ್ಯಾಹ್ನ ವೇಳೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟ ರಂಭಾಪುರಿ ಕಾಲೇಜಿನ ಅಂತಿಮ ಹಂತದ ಬಿಕಾಂ ವಿದ್ಯಾರ್ಥಿಗಳು ಎರಡು ದಿನಗಳ ಹಿಂದೆ ಪ್ರವಾಸಕ್ಕೆ ಹೊರಟಿದ್ದು, ಬಸ್ಸಿನಲ್ಲಿ 24 ವಿದ್ಯಾರ್ಥಿ, 23 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 50 ಮಂದಿ ಇದ್ದರು.

ಇವರೆಲ್ಲ ಮುರ್ಡೇಶ್ವರಕ್ಕೆ ತೆರಳಿದ್ದು, ಅಲ್ಲಿಂದ ಇಂದು ಬೆಳಗ್ಗೆ ಉಡುಪಿ ಕಡೆ ಬಸ್ಸಿನಲ್ಲಿ ಬರುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು, ರಸ್ತೆ ಬದಿ ನಿಲ್ಲಿಸಿದ ಗ್ಯಾಸ್ ಟ್ಯಾಂಕರ್‌ಗೆ ಢಿಕ್ಕಿ ಹೊಡೆಯಿತು. ಬಳಿಕ ಅಲ್ಲೇ ಮುಂದೆ ನಿಲ್ಲಿಸಿದ ಗೂಡ್ಸ್ ಲಾರಿಗೂ ಬಸ್ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ.

ಇದರಿಂದ ಬಸ್ಸಿನ ಮುಂದಿನ ಭಾಗ ನುಜ್ಜುಗುಜ್ಜಾಗಿದ್ದು, ಬಸ್ಸಿನಲ್ಲಿದ್ದ ಕ್ಲೀನರ್ ಮತ್ತು ಅಡುಗೆ ಸಹಾಯಕರೊಬ್ಬರು ಮೃತಪಟ್ಟರೆಂದು ತಿಳಿದುಬಂದಿದೆ.

ಉಳಿದಂತೆ ಹಲವು ವಿದ್ಯಾರ್ಥಿಗಳು ಗಾಯಗೊಂಡು ಕುಂದಾಪುರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!