ಪ್ರಸಾದ್ ನೇತ್ರಾಲಯ: ಶಿಕಾರಿಪುರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ
ಶಿವಮೊಗ್ಗ: ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ, ಸಂಸದ ಬಿ.ವೈ.ರಾಘವೇಂದ್ರ ಇವರ ನೇತ್ರತ್ವದಲ್ಲಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ, ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆ ಹಾಗೂ ಒನ್ ಸೈಟ್ ಎಸ್ಸಿಲಾರ್ ಲಕ್ಸೊಟ್ಟಿಕಾ ಫೌಂಡೇಶನ್, ಬೆಂಗಳೂರು ಇವರ ಆಶ್ರಯದಲ್ಲಿ ಇತ್ತೀಚೆಗೆ ಶಿಕಾರಿಪುರದ ಮಂಗಳ ಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆ ಹಾಗೂ ಉಚಿತ ಕನ್ನಡಕ ವಿತರಣಾ ಶಿಬಿರದಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಪ್ರಸಾದ್ ನೇತ್ರಾಲಯ ವತಿಯಿಂದ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಫಲಾನುಭವಿಗಳಿಗೆ ಕನ್ನಡಕ ವಿತರಿಸಿದರು. ಈ ಸಂಧರ್ಭದಲ್ಲಿ ಪ್ರಸಾದ್ ನೇತ್ರಾಲಯ ಸಮೂಹ ಕಣ್ಣಿನ ಆಸ್ಪತ್ರೆಗಳ ವೈದ್ಯಕೀಯ ನಿರ್ದೇಶಕ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲು ಅವರನ್ನು ಅವರ ಅವಿರತ ಸಾಮಾಜಿಕ ಸೇವಾ ಕಾರ್ಯಗಳಿಗಾಗಿ ಸನ್ಮಾನಿಸಿದರು.
ಈ ಶಿಬಿರದಲ್ಲಿ ಆಯ್ಕೆಯಾದವರಲ್ಲಿ ಈಗಾಗಲೇ 82 ಮಂದಿಗೆ ಉಚಿತ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು. 342 ಮಂದಿಗೆ ಉಚಿತ ಕನ್ನಡಕ ವಿತರಿಸಲಾಯಿತು.





