ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಜಯದ ಮಾಲೆ!
Oplus_131072
ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಆರಂಭಿಕ ಸುತ್ತಿನಿಂದಲೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಉಮೇಶ್ ಮೇಟಿ 18ಸಾವಿರಕ್ಕೂ ಹೆಚ್ಚು ಮತಗಳಿಂದ ಜಯ ಗಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರಲ್ಲಿ ಹರ್ಷೋದ್ಗಾರ ಮೂಡಿದೆ.
ಮತ ಎಣಿಕೆ ಕೇಂದ್ರದ ಹೊರಭಾಗದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ ಸಂಭ್ರಮಾಚರಣೆ ನಡೆಸಿದ್ದು, ಕಾಂಗ್ರೆಸ್ ಬಾವುಟಗಳನ್ನು ಹಿಡಿದು, ಜೈಕಾರಗಳನ್ನು ಕೂಗಿದ್ದಾರೆ.
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಉಮೇಶ ಮೇಟಿ ಅವರ ಭಾವಚಿತ್ರ ಹಿಡಿದು ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸತತ ಹಿನ್ನಡೆ ಅನುಭವಿಸುತ್ತಿದ್ದಾರೆ.





