ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ಗೆ ಪ್ರಯಾಸದ ಗೆಲುವು!
ದಾವಣಗರೆ : ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಗೆಲುವಿನ ನಗೆ ಬೀರಿದ್ದಾರೆ. ಈ ಸಂಬಂಧ ಅಧಿಕೃತ ಘೋಷಣೆ ಬಾಕಿ ಇದೆ.
ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ ಅವರ ವಿರುದ್ಧ 4967 ಮತಗಳ ಅಂತರದಿಂದ ಗೆದ್ದಿದ್ದು, 20ನೇ ಸುತ್ತಿನ ಎಣಿಕೆ ಬಳಿಕ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಬೆಂಬಲಿಗರು ವಿಜಯೋತ್ಸವ ಆಚರಿಸಿದರು.
ದಾವಣಗೆ ಗೆಲ್ಲುವ ಮೂಲಕ ಕಾಂಗ್ರೆಸ್ ಕ್ಷೇತ್ರವನ್ನು ಮರಳಿ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿಯಾಗಿದ್ದ ಶ್ರೀನಿವಾಸ್ ದಾಸಕರಿಯಪ್ಪ ತೀವ್ರ ಪೈಪೋಟಿ ನೀಡಿದ್ದರಾದರೂ ಅಂತಿಮವಾಗಿ ಸೋಲುಂಡಿದ್ದಾರೆ.
ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಎ.9ರಂದು ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ಪಕ್ಷದ ಟಿಕೆಟ್ ಗೊಂದಲ, ಅಲ್ಪಸಂಖ್ಯಾತ ಸಮುದಾಯದ ಅಸಮಾಧಾನ ಹಾಗೂ ಆನಂತರದ ಬೆಳವಣಿಗೆಗಳ ಮಧ್ಯೆ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಜಯಭೇರಿ ಭಾರಿಸಿದೆ.





