ಉಡುಪಿ: ಅಂತಾರಾಷ್ಟ್ರೀಯ ದಾದಿಯರ ದಿನದ ಪ್ರಯುಕ್ತ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣಾ ಕಾರ್ಯಾಗಾರ
ಉಡುಪಿ, ಮೇ 13: ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಶ್ರೀ ಆದರ್ಶ ಕಾಲೇಜ್ ಆಫ್ ನರ್ಸಿಂಗ್ ನ Community health nursing and nursing foundation ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ದಾದಿಯರ ದಿನದ ಪ್ರಯುಕ್ತ ಜೈವಿಕ ವೈದ್ಯಕೀಯ ತ್ಯಾಜ್ಯ(Biomedical waste management) ವಿಷಯದ ಕುರಿತು ನಿರಂತರ ನರ್ಸಿಂಗ್ ಶಿಕ್ಷಣ (CNE) ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಈ ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಆಸ್ಪತ್ರೆ ಯ ದಾದಿಯರು, ಆರೋಗ್ಯ ಸೇವಾ ತಂಡದ ಸದಸ್ಯರು ಹಾಗೂ ವಿದ್ಯಾರ್ಥಿಗಳಿಗೆ ನಡೆಸಲಾಗಿದ್ದು, ಆರೋಗ್ಯ ಸಂಸ್ಥೆಗಳಲ್ಲಿ ಜೈವಿಕ ವೈದ್ಯಕೀಯ ತ್ಯಾಜ್ಯ(Biomedical waste management) ವನ್ನು ಸುರಕ್ಷಿತವಾಗಿ ನಿರ್ವಹಿಸುವ ಕುರಿತು ಜಾಗೃತಿ ಮೂಡಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾದ ಡಾ.ಅಶೋಕ್ ಎಚ್. ಜಿಲ್ಲಾ ಶಸ್ತ್ರಚಿಕಿತ್ಸಕ, ಜಿಲ್ಲಾ ಆಸ್ಪತ್ರೆ, ಉಡುಪಿ ಇವರು ಉದ್ಘಾಟಿಸಿ, ಜೈವಿಕ ವೈದ್ಯಕೀಯ ತ್ಯಾಜ್ಯದ ಸರಿಯಾದ ವಿಂಗಡಣೆ ಮತ್ತು ನಿರ್ವಹಣೆ ಸೋಂಕು ತಡೆಗಟ್ಟಲು ಹಾಗೂ ಪರಿಸರ ಸಂರಕ್ಷಣೆಗೆ ಅತ್ಯಂತ ಮುಖ್ಯವೆಂದು ತಿಳಿಸಿದರು.

ಗೌರವ ಅತಿಥಿಗಳಾದ ಲೀಲಾವತಿ, ನರ್ಸಿಂಗ್ ಇನ್ಚಾರ್ಜ್ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಆರೋಗ್ಯ ಸಿಬ್ಬಂದಿಗೆ ಇಂತಹ ಶಿಕ್ಷಣ ಕಾರ್ಯಕ್ರಮಗಳು ಅಗತ್ಯವೆಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಆದರ್ಶ ಕಾಲೇಜ್ ಆಫ್ ನರ್ಸಿಂಗ್ ಪ್ರಿನ್ಸ್ ಪಾಲ್ ಪ್ರೊ.ಸುದೀನಾ ಎಂ. ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕಿ ಭಾರತಿ ಇವರು ಉಪಸ್ಥಿತರಿದ್ದರು. ವಿನಯ ಸ್ವಾಗತಿಸಿ, ಉಪನ್ಯಾಸಕಿ ದಿವ್ಯಾ ಕಾರ್ಯಕ್ರಮ ನಿರೂಪಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ನಿಶಾ ವಾಸುದೇವ ಜೈವಿಕ ವೈದ್ಯಕೀಯ ತ್ಯಾಜ್ಯ ನಿರ್ವಹಣೆ(Biomedical waste management) ಕುರಿತು ಸಮಗ್ರ ಮಾಹಿತಿ ನೀಡಿದರು. ಪೂಜಾ, 4ನೇ ವರ್ಷದ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿನಿ ವಂದನಾರ್ಪಣೆ ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ ದಾದಿಯರು, ಆರೋಗ್ಯ ಸೇವಾ ತಂಡದ ಸದಸ್ಯರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು. ಎಲ್ಲರಿಗೂ ಪ್ರಮಾಣಪತ್ರವನ್ನು ವಿತರಿಸಲಾಯಿತು.





