ಸುಳ್ಯ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಖಾಸಗಿ ಶಾಲೆ ಸಿಬ್ಬಂದಿ ಅಮಾನತು
ಮಂಗಳೂರು :ಖಾಸಗಿ ಶಾಲೆ ಸಿಬ್ಬಂದಿಯೊಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ. ಸುಳ್ಯ ತಾಲೂಕಿನ ದೇವಚಲ್ಲ ಗ್ರಾಮದ ಅನಿಲ್ ಅಮಾನತುಗೊಂಡಿರುವ ಸಿಬ್ಬಂದಿ. ಡಿಸೆಂಬರ್ 10 ರಂದು ಈ ಘಟನೆ ನಡೆದಿದ್ದು, ಬಾಲಕಿಗೆ ಹೊಸ ಬೈಸಿಕಲ್ ತಂದು ಕೊಡುವ ಭರವಸೆ ನೀಡಿದ್ದ ಈತ, ಬೈಸಿಕಲ್ ತುಳಿಯುವುದು ಕಳಿಸಿಕೊಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಸುಬ್ರಮಣ್ಯ ಪೊಲೀಸರು ತಿಳಿಸಿದ್ದಾರೆ. ಯೆಲಿಮಲೆಯಲ್ಲಿರುವ ಖಾಸಗಿ ಶಾಲೆಯಲ್ಲಿ ಅನಿಲ್ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ, ಅನಿಲ್ ಮತ್ತು ಬಾಲಕಿ ತಂದೆ ಸ್ನೇಹಿತರಾಗಿದ್ದಾರೆ. ಇದೀಗ ಬಾಲಕಿ ಮನೆಯಲ್ಲಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದು, ಪೋಷಕರು ಶಾಲಾ ಆಡಳಿತ ಮಂಡಳಿಗೆ ವಿಷಯ ತಿಳಿಸಿದ್ದಾರೆ. ಬಾಲಕಿ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುತ್ತಿದ್ದಂತೆ, ಶಾಲಾ ಆಡಳಿತ ಮಂಡಳಿ ಅನಿಲ್ ನನ್ನು ಅಮಾನತು ಗೊಳಿಸಿದೆ.ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆ ಯಲ್ಲಿ ಪೋಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. |