ಸಾರಿಗೆ ನೌಕರರ ಮುಷ್ಕರ ವಾಪಸ್

ಬೆಂಗಳೂರು: ನಾಲ್ಕು ಸಾರಿಗೆ ನಿಗಮಗಳ ನೌಕರರು ಐದು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ. ಸಂಜೆಯಿಂದಲೇ ಎಲ್ಲ ಬಸ್‌ಗಳ ಸಂಚಾರ ಆರಂಭವಾಗಲಿದೆ.

ರಾಜ್ಯ ಸರ್ಕಾರ ಸಂಧಾನ ಸಭೆಯ ನಡಾವಳಿಗಳನ್ನು ಲಿಖಿತವಾಗಿ ಸಲ್ಲಿಸಿದ ಬಳಿಕವೂ ನೌಕರರು ತಕರಾರು ಎತ್ತಿದರು. ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಪಟ್ಟು ಹಿಡಿದರು. ಇದರಿಂದಾಗಿ ಮತ್ತೆ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಬಳಿಕ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರೊಂದಿಗೆ ಕೋಡಿಹಳ್ಳಿ ಚಂದ್ರಶೇಖರ್ ಮಾತುಕತೆ ನಡೆಸಿದರು.‌ ನಂತರವೂ ನೌಕರರು ಮುಷ್ಕರ ಹಿಂಪಡೆಯಲು ಒಪ್ಪಲಿಲ್ಲ. ಒಂದು ಗಂಟೆಗೂ ಹೆಚ್ಚು ಕಾಲ ಮನವೊಲಿಕೆ ನಡೆಸಿದ ಕೋಡಿಹಳ್ಳಿ ಚಂದ್ರಶೇಖರ್, ಅಂತಿಮವಾಗಿ ಮುಷ್ಕರ ವಾಪಸ್ ಪಡೆಯುವ ನಿರ್ಧಾರ ಪ್ರಕಟಿಸಿದರು.

ಮುಷ್ಕರ ವಾಪಸ್ ಪಡೆದ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಹೆಚ್ಚಿನ ಸಂಖ್ಯೆಯ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ನಾಲ್ಕೂ ಸಾರಿಗೆ ನಿಗಮಗಳಲ್ಲಿ‌ ಬಸ್‌ಗಳ ಸಂಚಾರಕ್ಕೆ ಭರದ ಸಿದ್ಧತೆ ಆರಂಭವಾಗಿದೆ.

Leave a Reply

Your email address will not be published. Required fields are marked *

error: Content is protected !!