ಬಿಜೆಪಿಯನ್ನೇ ಹಿಂದಿಕ್ಕಿದ ‘Cockroach Janta Party’- ಐದೇ ದಿನದಲ್ಲಿ 10 ಮಿಲಿಯನ್ ಫಾಲೋವರ್ಸ್!
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರ ಹೇಳಿಕೆಗೆ ವಿರೋಧವಾಗಿ ಆರಂಭವಾದ ಕಾಕ್ರೋಚ್ ಜನತಾ ಪಾರ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಇನ್ಸ್ಟಾಗ್ರಾಮ್ ನಲ್ಲಿ ಕೇಂದ್ರದ ಆಡಳಿತರೂಢ ಬಿಜೆಪಿಯನ್ನೇ ಹಿಂದಿಕ್ಕಿದೆ.
ಕಳೆದ ವಾರ ಆರಂಭವಾದ ವಿಡಂಬನಾತ್ಮಕ ಕಾಕ್ರೋಚ್ ಜನತಾ ಪಕ್ಷ(CJP) ಭಾರತದ ರಾಜಕೀಯ ವಲಯ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದು, ಇನ್‌ಸ್ಟಾಗ್ರಾಮ್ ನಲ್ಲಿ ಬಿಜೆಪಿಯ ಅಧಿಕೃತ ಖಾತೆಯನ್ನು ಹಿಂದಿಕ್ಕಿದೆ.
ಇನ್‌ಸ್ಟಾಗ್ರಾಮ್ ನಲ್ಲಿ ಅಕೌಂಟ್ ಓಪನ್ ಆದ್ಮೇಲೆ ಕೇವಲ ಐದನೇ ದಿನಗಳಲ್ಲಿಯೇ 10 ಮಿಲಿಯನ್‌ಗಿಂತಲೂ ಅಂದ್ರೆ 1 ಕೋಟಿಗೂ ಅಧಿಕ ಫಾಲೋವರ್ಸ್ ಹೊಂದಿದೆ.
@cockroachjantaparty ಹೆಸರಿನ Instagram ಖಾತೆ ಈವರೆಗೆ 10.6 ಮಿಲಿಯನ್ ಫಾಲೋವರ್ಸ್‌ಗಳನ್ನು ಹೊಂದಿದ್ದು, ಕ್ಷಣ ಕ್ಷಣದಿಂದ ಈ ಸಂಖ್ಯೆ ಏರಿಕೆಯಾಗುತ್ತಿದೆ.
ಬಿಜೆಪಿಯ ಅಧಿಕೃತ ಖಾತೆ @bjp4india ಸುಮಾರು 8.7 ಮಿಲಿಯನ್ ಫಾಲೋವರ್ಸ್ ಹೊಂದಿದೆ. ಕಾಂಗ್ರೆಸ್‌ನ @incindia ಖಾತೆಗೆ ಸುಮಾರು 13.2 ಮಿಲಿಯನ್ ಫಾಲೋವರ್ಸ್ ಇದ್ದರೆ, ಆಮ್ ಆದ್ಮಿ ಪಕ್ಷದ ಖಾತೆಗೆ ಸುಮಾರು 1.9 ಮಿಲಿಯನ್ ಫಾಲೋವರ್ಸ್ ಗಳಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಯುವ ನಿರುದ್ಯೋಗಿ ಯುವಕರು ‘ಜಿರಳೆಗಳಂತೆ’ ಎಂದು ಟೀಕಿಸಿದ್ದರು. ಅವರಲ್ಲಿ ಕೆಲವರು ಮಾಧ್ಯಮಗಳಲ್ಲಿ, ಇನ್ನು ಕೆಲವರು ಸಾಮಾಜಿಕ ಮಾಧ್ಯಮದಲ್ಲಿದ್ದರೆ, ಇನ್ನು ಕೆಲವರು ಆರ್‌ಟಿಐ ಕಾರ್ಯಕರ್ತರಾಗಿದ್ದಾರೆ’ ಎಂದು ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಶುಕ್ರವಾರ ಕಿಡಿಕಾರಿದ್ದರು. ಅವರ ಹೇಳಿಕೆ ಖಂಡಿಸಿ ವಿಭಿನ್ನ ಹೆಸರಿನಲ್ಲಿ ಆರಂಭಿಸಿದ ಕಾಕ್ರೋಚ್ ಜನತಾ ಪಕ್ಷ ಸೋಷಿಯಲ್ ಮೀಡಿಯಾದಲ್ಲಿ ಬಿರುಗಾಳಿ ಎಬ್ಬಿಸಿದೆ.





