ಉಡುಪಿ: ಬಾವಿ ಕುಸಿದು ಓರ್ವ ಕಾರ್ಮಿಕ ಮೃತ್ಯು- ಇನ್ನೋರ್ವ ಮಣ್ಣಿನಡಿ ಸಿಲುಕಿರುವ ಶಂಕೆ?
ಉಡುಪಿ: ಬಾವಿ ತೊಡುತ್ತಿರುವಾಗ ಮಣ್ಣು ಕುಸಿದು ಓರ್ವ ಕಾರ್ಮಿಕ ಮೃತಪಟ್ಟಿದ್ದು, ಇನ್ನೋರ್ವ ಕುಸಿದ ಮಣ್ಣಿನಡಿ ಸಿಲುಕಿರುವ ಘಟನೆ ಕೊಡವೂರಿನ ಗರಡಿಮಜಲಿನಲ್ಲಿ ಇಂದು ಸಂಜೆ ನಡೆದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಮತ್ತು ಪೊಲೀಸರು ದೌಡಾಯಿದ್ದಾರೆ. ಓರ್ವ ಕಾರ್ಮಿಕನ ಮೃತ ದೇಹ ಮಣ್ಣಿನಡಿಯಿಂದ ಹೊರಕ್ಕೆ ತೆಗೆಯಲಾಗಿದೆ. ಮತ್ತೋರ್ವ ಕುಸಿದ ಮಣ್ಣಿನಡಿ ಸಿಲುಕಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರಿದೆ.





