ಬಾಡಿಗೆ ಮನೆಯಲ್ಲಿ ವೇಶ್ಯಾವಟಿಕೆ: ಮೂವರ ಬಂಧನ
ಬೆಳ್ತಂಗಡಿ: ಬಾಡಿಗೆ ಮನೆಯಲ್ಲಿ ಕಾರ್ಯಚರಿಸುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ನಡೆಸಿರುವ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಳ್ತಂಗಡಿಯ ಮೇಲಂತಬೆಟ್ಟು ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿ ನಡೆದಿದೆ.
ಬಂಧಿತರನ್ನು ಜನಾರ್ದನ ಪೂಜಾರಿ(45) ಜನಾರ್ದನ ಇಳಂತಿಲ (40) ಮತ್ತು ರಾಮಚಂದ್ರ ದೇವಾಡಿಗ (45) ಎಂದು ಗುರುತಿಸಲಾಗಿದೆ. ಪೊಲೀಸ್ ದಾಳಿ ವೇಳೆ ವೈಶ್ಯಾವಾಟಿಕೆಯಲ್ಲಿ ನೊಂದ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ.
ಇನ್ನು ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ವೃತ್ತ ನಿರೀಕ್ಷಕರು ಕೂಡಲೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸ್ ವಿಚಾರಣೆ ವೇಳೆ ಬಂಧಿತ ಆರೋಪಿಗಳಲ್ಲಿ ರಾಮಚಂದ್ರ ದೇವಾಡಿಗ ತನ್ನ ಮನೆಯಲ್ಲೆ ಕೃತ್ಯಕ್ಕೆ ಅವಕಾಶ ನೀಡಿದ್ದಾಗಿ ತಿಳಿದು ಬಂದಿದ್ದು, ಬಂಧಿತರ ವಿರುದ್ದ ಐಪಿಸಿ ಸೆಕ್ಷನ್ 3, 4,5 (ಡಿ) ಐ.ಟಿ.ಪಿ ಕಾಯ್ದೆಯಂತೆ ಪ್ರಕರಣ ದಾಖಲಿಸಲಾಗಿದೆ. ಬಂಟ್ವಾಳ ಡಿವೈಎಸ್‌ಪಿ ವೆಲೆಂಟೈನ್ ಡಿಸೋಜಾ ಅವರ ನೇತೃತ್ವದಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ.