ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!
ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಕಳೆದ ಆರು ತಿಂಗಳಿನಿಂದ ದಿನನಿತ್ಯ ಕೇಳಿಬರುತ್ತಿದ್ದ ಸಿಎಂ ಹುದ್ದೆ ಬದಲಾವಣೆ, ನಾಯಕತ್ವ ಹಸ್ತಾಂತರ ಪ್ರಹಸನಕ್ಕೆ ತೆರೆ ಬೀಳುವ ಸಮಯ ಬಂದಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಗೊಂದಲಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ತೆರೆ ಎಳೆದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ.
ಈ ಮೊದಲು ಮಾಡಿಕೊಳ್ಳಲಾಗಿದ್ದ ಆಂತರಿಕ ‘ಅಧಿಕಾರ ಹಂಚಿಕೆ ಸೂತ್ರ’ದ ಪ್ರಕಾರವೇ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದರೊಂದಿಗೆ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಹೊಸ ನಾಯಕತ್ವದ ಅಧ್ಯಾಯ ಆರಂಭವಾಗುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.
“ಅವರು ಶುಕ್ರವಾರ ರಾಜ್ಯಪಾಲರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ” ಎಂದು ಮುಖ್ಯಮಂತ್ರಿಯ ಆಪ್ತ ಮೂಲಗಳು ತಿಳಿಸಿವೆ. ಕಾಂಗ್ರೆಸ್ ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರು ಗೆಹ್ಲೋಟ್ ಅವರಿಗೆ ರಾಜೀನಾಮೆ ನೀಡಬಹುದು.
ಸದ್ಯ ಸಿದ್ದರಾಮಯ್ಯ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಯುತ್ತಿದ್ದೆ. ಅದರಲ್ಲಿ ಡಿ ಕೆ ಶಿವಕುಮಾರ್ ಭಾಗಿಯಾಗಿದ್ದು ಬಹಳಷ್ಟು ಕುತೂಹಲ ಮೂಡಿದೆ. ಅದಾದ ನಂತರ ಸಿದ್ದರಾಮಯ್ಯ ಅವರು ಅಧಿಕೃತವಾಗಿ ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸುವ ಸಾಧ್ಯತೆಯಿದೆ.





