ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ- ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ,ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಸಚಿವರೊಂದಿಗಿನ ಬ್ರೇಕ್‌ಫಾಸ್ಟ್‌ ಮೀಟಿಂಗ್ ನಲ್ಲಿ ಮಾತನಾಡಿರುವ ಮುಖ್ಯಮಂತ್ರಿಗಳು, ಹೈಕಮಾಂಡ್ ಹೇಳುವುದನ್ನು ಪಾಲನೆ ಮಾಡುವುದು ನನ್ನ ಕರ್ತವ್ಯ. ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆಂದು ಹೇಳಿದ್ದಾರೆಂದು ತಿಳಿದುಬಂದಿದೆ.

ಡಿಕೆಶಿ ನಿವಾಸದ ಬಳಿ ಹಬ್ಬದ ವಾತಾವರಣ

ಸಿದ್ದರಾಮಯ್ಯ ರಾಜೀನಾಮೆ ಬಹುತೇಕ ಖಚಿತವಾಗುತ್ತಿದ್ದು, ಇದರ ಬೆನ್ನಲ್ಲೇ ಡಿಕೆ.ಶಿವಕುಮಾರ್ ಅವರ ನಿವಾಸದ ಬಳಿ ಅವರ ಅಭಿಮಾನಿಗಳು ಸಂಭ್ರಮವನ್ನಾಚರಿಸುತ್ತಿದ್ದಾರೆ. ಡಿಕೆ.ಶಿವಕುಮಾರ್ ಅವರ ನಿವಾಸದ ಬಳಿ ಧಾವಿಸಿರುವ ಅಭಿಮಾನಿಗಳು, ಸಿಹಿ ಹಂಚಿ ಸಂತಸ ವ್ಯಕ್ತಪಡಿಸುತ್ತಿದ್ದಾರೆ.

ಡಿಕೆ ಶಿವಕುಮಾರ್ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಸಿಎಂ ಸಿದ್ದರಾಮಯ್ಯ ಅವರ ಬ್ರೇಕ್‌ಫಾಸ್ಟ್‌ ಸಭೆಗೆ ಆಗಮಿಸಿದ್ದಾರೆ. ಸದಾಶಿವನಗರದಿಂದ ಹೊರಟ ಡಿಕೆಶಿ ಕಾವೇರಿ ನಿವಾಸಕ್ಕೆ 9:30ಕ್ಕೆ ಆಗಮಿಸಿದರು.

ಡಿಸಿಎಂ ಆಗಮನದ ವೇಳೆ ಸಿದ್ದರಾಮಯ್ಯ ಅವರ ಬೆಂಬಲಿಗರ ಸಿದ್ದರಾಮಯ್ಯಗೆ ಜೈಕಾರ ಹಾಕಿದ್ದು, 5 ವರ್ಷ ಸಿದ್ದು ಸಿಎಂ ಎಂದು ಘೋಷಣೆ ಕೂಗಿ ಡಿಕೆಶಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

Leave a Reply

Your email address will not be published. Required fields are marked *

error: Content is protected !!