ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ- ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ: ಸಿದ್ದರಾಮಯ್ಯ
ಬೆಂಗಳೂರು: ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನಗರದಲ್ಲಿ ಇಲ್ಲದ ಕಾರಣ, ನಾನು ನನ್ನ ರಾಜೀನಾಮೆ ಪತ್ರವನ್ನು ಅವರ ವಿಶೇಷ ಕಾರ್ಯದರ್ಶಿಗೆ ನೀಡಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಸಾಂವಿಧಾನಿಕ ನಿಬಂಧನೆಗಳ ಪ್ರಕಾರ ರಾಜ್ಯಪಾಲರು ನನ್ನ ರಾಜೀನಾಮೆಯನ್ನು ಸ್ವೀಕರಿಸುತ್ತಾರೆ ಎಂಬ ವಿಶ್ವಾಸ ನನಗಿದೆ.

ಹೈಕಮಾಂಡ್ ಹೇಳಿದಾಗ ರಾಜೀನಾಮೆ ನೀಡುತ್ತೇನೆ ಎಂದು ನಾನು ಪದೇ ಪದೇ ಹೇಳಿದ್ದೆ. ಹೈಕಮಾಂಡ್ ಎರಡು ದಿನಗಳ ಹಿಂದೆ ರಾಜೀನಾಮೆ ನೀಡುವಂತೆ ಸೂಚಿಸಿತ್ತು, ಅದರಂತೆ ಇಂದು ನಾನು ರಾಜೀನಾಮೆ ಸಲ್ಲಿಸಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಎರಡು ಬಾರಿ ಕರ್ನಾಟಕದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.
550 ಭರವಸೆಗಳಲ್ಲಿ, ಸುಮಾರು 300 ಭರವಸೆಗಳನ್ನು ಇಲ್ಲಿಯವರೆಗೆ ಈಡೇರಿಸಲಾಗಿದೆ, ಜೊತೆಗೆ ಐದು ಗ್ಯಾರಂಟಿಗಳು. ನಾನು ನೀಡಿದ ಭರವಸೆಗಳಿಂದ ವಿಮುಖನಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ವಿರೋಧ ಪಕ್ಷಗಳು ನನ್ನ ವಿರುದ್ಧ ಹಲವು ಸುಳ್ಳು ಕಥೆಗಳನ್ನು ಕಟ್ಟಿದೆ. ‘ನಾನು ಹಣವನ್ನು ಬೆನ್ನಟ್ಟಿಲ್ಲ ಅಥವಾ ಆಸ್ತಿಗಳನ್ನು ಮಾಡಿಕೊಳ್ಳಲು ಹಂಬಲಿಸಿಲ್ಲ, ನನ್ನ ರಾಜಕೀಯ ಜೀವನವು ತೆರೆದ ಪುಸ್ತಕ’ ಎಂದು ಸಿದ್ದರಾಮಯ್ಯ ಹೇಳಿದರು.





