ಮಣಿಪಾಲ: ರೌಡಿ ಶೀಟರ್ ಗಣೇಶ್‌ ಗೂಂಡಾ ಕಾಯ್ದೆಯಡಿ ಬಂಧನ

ಮಣಿಪಾಲ: ನೇತಾಜಿ ನಗರದ 80 ಬಡಗಬೆಟ್ಟು ಗ್ರಾಮದ ರೌಡಿ ಶೀಟರ್ ಗಣೇಶ್‌(32)ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲು ಪೊಲೀಸ್‌ ಅಧೀಕ್ಷಕರು ವರದಿಯ ಮೇರೆಗೆ ಉಡುಪಿ ಜಿಲ್ಲಾ ದಂಡಾಧಿಕಾರಿಯವರು ಹಾಗೂ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿರುತ್ತಾರೆ.

ಇತನ ವಿರುದ್ದ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಕೊಲೆಯತ್ನ, ಹಲ್ಲೆ, ಅಕ್ರಮ ಕೂಟ, ಮಹಿಳೆಯರ ಮೇಲೆ ದೌರ್ಜನ್ಯ, ಕಳ್ಳತನ ಸಹಿತ ಒಟ್ಟು 9 ಪ್ರಕರಣಗಳು ದಾಖಲಾಗಿರುತ್ತದೆ. ಅವುಗಳ ಪೈಕಿ 03 ಪ್ರಕರಣಗಳು ಖುಲಾಸೆ, 04 ಪ್ರಕರಣ ನ್ಯಾಯಾಂಗ ವಿಚಾರಣೆ ಹಾಗೂ ಉಳಿದ 2 ಪ್ರಕರಣಗಳು ತನಿಖೆಯಲ್ಲಿರುತ್ತದೆ.

ಬಂಧಿತ ಆರೋಪಿಯನ್ನು ಕಲಬುರ್ಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!