13 ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ ಮಾಡಿದ ಸಿಎಂ ಡಿಕೆ ಶಿವಕುಮಾರ್- ಯಾರಿಗೆ ಯಾವ ಖಾತೆ…?

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ ಹಂಚಿಕೆ ಮಾಡಿದ್ದಾರೆ.

ಇದರೊಂದಿಗೆ ಹಣಕಾಸು, ಗೃಹ, ಕಂದಾಯ, ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃದ್ಧಿ ಸೇರಿದಂತೆ ಯಾರಿಗೆ ಯಾವ ಖಾತೆ ಸಿಗಲಿದೆ ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ.

ಪ್ರಮುಖ ಖಾತೆಗಳಿಗಾಗಿ ಪಟ್ಟು ಹಿಡಿದಿದ್ದ ಹಿರಿಯ ಸಚಿವರು ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಕಾರ್ಯ ನಿರ್ವಹಿಸಿದ ಖಾತೆಗಳನ್ನೇ ನೀಡಿ, ಅಲ್ಲಿ ಇನ್ನೂ ಕೆಲ ಅತೀಮುಖ್ಯ ಕಾರ್ಯ ಯೋಜನೆಗಳು ಬಾಕಿ ಉಳಿದಿದ್ದು, ಅವುಗಳನ್ನು ಪೂರ್ಣಗೊಳಿಸಬೇಕಿದೆ’ ಎಂದು ಸಿಎಂ ಡಿ.ಕೆ.ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿದ್ದರು. ಹೀಗಾಗಿ ಹಲವು ಸಚಿವರಿಗೆ ಈ ಹಿಂದೆ ನೀಡಿದ್ದ ಖಾತೆಗಳನ್ನು ನೀಡಲಾಗಿದೆ.

ಬೆಂಗಳೂರು ನಗರಾಭಿವೃದ್ಧಿ ಖಾತೆ ಬಯಸಿದ್ದ ರಾಮಲಿಂಗಾ ರೆಡ್ಡಿ ಅವರಿಗೆ ಜಲಸಂಪನ್ಮೂಲ ಖಾತೆಯ ಜವಾಬ್ದಾರಿ ನೀಡಲಾಗಿದೆ. ಆದರೆ ಕೃಷ್ಣ ಭೈರೇಗೌಡ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ವಹಿಸಲಾಗಿದೆ.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌ ಅವರಿಗೆ ಕಂದಾಯ ಮತ್ತು ಯುವ ಸಬಲೀಕರಣ ಇಲಾಖೆಯ ಜವಾಬ್ದಾರಿ ಕೊಡಲಾಗಿದೆ. ಅದರಂತೆ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಲೋಕೋಪಯೋಗಿ ಇಲಾಖೆಯ ಜವಾಬ್ದಾರಿಯನ್ನು ನೀಡಲಾಗಿದೆ.

ಡಿಕೆ ಶಿವಕುಮಾರ್‌ ಸಂಪುಟದ ಮತ್ತೋರ್ವ ಪ್ರಮುಖ ಸಚಿವ ಕೆಜೆ ಜಾರ್ಜ್‌ ಅವರಿಗೆ ಇಂಧನ ಖಾತೆ ನೀಡಲಾಗಿದೆ. ಹಾಗೆಯೇ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಭೈರತಿ ಸುರೇಶ್‌ ಅವರಿಗೆ ಸಾರಿಗೆ ಇಲಾಖೆ ನೀಡಲಾಗಿದೆ.

ಯಾರಿಗೆ ಯಾವ ಖಾತೆ

ಡಿಕೆ ಶಿವಕುಮಾರ್ – ಮುಖ್ಯಮಂತ್ರಿ – ಹಣಕಾಸು, ಗುಪ್ತಚರ, ಸಹಕಾರ, ಸಿಬ್ಬಂದಿ ಆಡಳಿತ ಸುಧಾರಣೆ

ಡಾ. ಜಿ ಪರಮೇಶ್ವರ – ಉಪಮುಖ್ಯಮಂತ್ರಿ – ಕಂದಾಯ, ಯುವ ಸಬಲೀಕರಣ

ಕೃಷ್ಣ ಬೈರೇಗೌಡ – ಬೆಂಗಳೂರು ಅಭಿವೃದ್ದಿ

ಪ್ರಿಯಾಂಕ್ ಖರ್ಗೆ – ಗೃಹ, ಐಟಿಬಿಟಿ

ಡಾ.ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ದಿ, ಹಿಂದುಳಿದ ಕಲ್ಯಾಣ

ಯುಟಿ ಖಾದರ್ – ಆರೋಗ್ಯ

ಸತೀಶ್ ಜಾರಕಿಹೊಳಿ – ಲೋಕೋಪಯೋಗಿ

ಎಂಬಿ ಪಾಟೀಲ್ – ಬೃಹತ್ ಕೈಗಾರಿಕೆ

ಕೆಜೆ ಜಾರ್ಜ್ – ಇಂಧನ, ಪ್ರವಾಸೋದ್ಯಮ

ಕೆಎಚ್ ಮುನಿಯಪ್ಪ – ಆಹಾರ

ರಾಮಲಿಂಗಾ ರೆಡ್ಡಿ – ಜಲಸಂಪನ್ಮೂಲ

ಈಶ್ವರ್ ಖಂಡ್ರೆ – ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ದಿ

ಬೈರತಿ ಸುರೇಶ್ – ಸಾರಿಗೆ

ಡಾ.ಶರಣ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ

Leave a Reply

Your email address will not be published. Required fields are marked *

error: Content is protected !!