CJP ಪ್ರತಿಭಟನೆ: ಜಂತರ್ ಮಂತರ್‌‌ಗೆ ಜಮಾಯಿಸಿದ ಪ್ರತಿಭಟನಾಕಾರರು- ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯ

Oplus_131072

ಹೊಸದಿಲ್ಲಿ: ದಿಲ್ಲಿಯ ಜಂತರ್ ಮಂತರ್ ನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಗೆ ಜಮಾಯಿಸಿದ ಪ್ರತಿಭಟನಾಕಾರರು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿದರು.

“ನಾವು ಶಿಕ್ಷಣ ಸಚಿವರನ್ನು ಆಯ್ಕೆ ಮಾಡಿ ಕಳುಹಿಸಿದ್ದೇವೆ; ಅವರು ನಮ್ಮ ತೆರಿಗೆಯಿಂದ ಸಂಬಳ ಪಡೆಯುತ್ತಾರೆ. ಅವರ ಅವಧಿಯಲ್ಲಿ ಲಕ್ಷಾಂತರ ಯುವಕರ ಭವಿಷ್ಯವು ಕತ್ತಲೆಯಲ್ಲಿ ಮುಳುಗಿದೆ. ಕಾಕ್ರೋಚ್ ಬರುತ್ತಿವೆ, ಧರ್ಮೇಂದ್ರ ಪ್ರಧಾನ್ ಹೋಗುತ್ತಿದ್ದಾರೆ” ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.

ಜಂತರ್ ಮಂತರ್ ನಲ್ಲಿ ಶನಿವಾರ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಅಮೆರಿಕದಿಂದ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದಿಪ್ಕೆ ದಿಲ್ಲಿಗೆ ಆಗಮಿಸಿದ್ದಾರೆ. ಕಾಕ್ರೋಚ್ ಗಳು ಜಂತರ್ ಮಂತರ್‌ಗೆ ಬರಬೇಕು ಮತ್ತು ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಅಭಿಜೀತ್ ದಿಪ್ಕೆ ಆಗ್ರಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!