ಮಂಗಳೂರು: ತಲವಾರು ದಾಳಿ – ಯುವಕನ ಕೊಲೆ ಯತ್ನ
ಮಂಗಳೂರು: ಯುವಕನ ಮೇಲೆ ತಲವಾರು ದಾಳಿ ನಡೆಸಿ ತಂಡವೊ0ದು ಕೊಲೆ ಯತ್ನ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅಡ್ಡೂರಿನಲ್ಲಿ ನಡೆದಿದೆ.
ಅಡ್ಡೂರು ನಿವಾಸಿ ಮಹಮ್ಮದ್ ತಾಜುದ್ದೀನ್ ತಲವಾರು ದಾಳಿಗೆ ಒಳಗಾದ ಯುವಕ ಎಂದು ಗುರುತಿಸಲಾಗಿದೆ.
ಈತ, ಅಡ್ಡೂರಿನಿಂದ ಮನೆ ಕಡೆ ತೆರಳುತ್ತಿದ್ದ ವೇಳೆ ಮೂರು ಮಂದಿಯ ತಂಡವೊoದು ತಲವಾರು ದಾಳಿ ನಡೆಸಿ ಪರಾರಿಯಾಗಿದೆ. ಹಲ್ಲೆಯಿಂದ ಗಂಭೀರ ಗಾಯಗೊಂಡ ಯುವಕನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯುವಕನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ದಾಳಿಯು ಫರ್ವೀಝ್ ಹಾಗೂ ತಂಡದಿ0ದ ನಡೆದಿದೆ ಎಂದು ಶಂಕಿಸಲಾಗಿದ್ದು, ಈ ಬಗ್ಗೆ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.