ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ವನಮಹೋತ್ಸವ

ಉಡುಪಿ, ಜೂ.22: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ, ಬಡಗಬೆಟ್ಟು ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಉಡುಪಿ ಹಾಗೂ ಸಹಕಾರ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮವನ್ನು ರವಿವಾರ ಮಣಿಪಾಲದ ಪ್ರಗತಿನಗರದಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಡಾ.ವಿ.ಎಸ್.ಆಚಾರ್ಯ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ, ಉಡುಪಿ ಜಿಲ್ಲಾ ಸಹಕಾರ ಯೂನಿ ಯನ್ ಮತ್ತು ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಲಯನ್ ಪಿಡಿಜಿ ಎನ್.ಎಂ. ಹೆಗಡೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಖಜಾಂಚಿ ಹರಿಪ್ರಸಾದ್ ರೈ, ಜಿಲ್ಲಾ ಕಾರ್ಯದರ್ಶಿ ಆನಂದ ಬಿ.ಅಡಿಗ, ರಾಜ್ಯ ಸಹಾಯಕ ಆಯುಕ್ತೆ ಸುಮನಾ ಶೇಖರ್, ಶುಭಾ, ಅಲೆವೂರು ಗ್ರಾಪಂನ ಮಾಜಿ ಅಧ್ಯಕ್ಷ ಯತೀಶ್ ಕುಮಾರ್, ಯೋಗ ಶಿಕ್ಷಕರಾದ ಚೆನ್ನಮ್ಮ ಉಡುಪ ಹಾಗೂ ಶೋಭಾ ಶೆಟ್ಟಿ, ಗೈಡ್ ಕಮಿಷನರ್ ಜ್ಯೋತಿ ಪೈ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜನರಲ್ ಮ್ಯಾನೇಜರ್ ರಾಜೇಶ್ ಶೇರಿರ್ಗಾ, ಎ.ಜಿ.ಎಂ. ಪ್ರವೀಣ್ ಕುಮಾರ್ ಹಾಗೂ ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಉಪಸ್ಥಿತರಿದ್ದರು.

ಬಡಗಬೆಟ್ಟು ಸೊಸೈಟಿಯ ಮ್ಯಾನೇಜರ್ ನವೀನ್ ಕಾರ್ಯಕ್ರಮ ನಿರೂಪಿಸಿದರು. ಅನುಷಾ ಕೋಟ್ಯಾನ್ ಸ್ವಾಗತಿಸಿದರು. ಪ್ರವೀಣ್ ಕುಮಾರ್ ವಂದಿಸಿದರು.

Leave a Reply

Your email address will not be published. Required fields are marked *

error: Content is protected !!