ಮದ್ಯಪಾನ ಮಾಡಿ ಕಾರು ಚಲಾಯಿಸಿ ಅಪಘಾತ: ಆರೋಪಿಗೆ ನ್ಯಾಯಾಂಗ ಬಂಧನ
ಉಡುಪಿ, ಜೂ. 25: ಮಣಿಪಾಲದ ಈಶ್ವರನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮದ್ಯಪಾನ ಮಾಡಿ ಕಾರು ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಗಂಭೀರ ಗಾಯಗಳಿಗೆ ಕಾರಣವಾದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.
ಜೂನ್ 19ರಂದು ರಾತ್ರಿ ಸುಮಾರು 10.08 ಗಂಟೆಗೆ ಕರ್ವಾಲು, ಅಲೆವೂರು ಗ್ರಾಮದ ನಿವಾಸಿ ಅಭಿಷೇಕ್ ನಾಯಕ್ ಸ್ಕೂಟಿಯಲ್ಲಿ ಮಣಿಪಾಲದಿಂದ ಕೆಳಪರ್ಕಳದಲ್ಲಿರುವ ಮನೆಗೆ ತೆರಳುತ್ತಿದ್ದರು. ಈ ವೇಳೆ NH-169A ಹೆದ್ದಾರಿಯಲ್ಲಿರುವ ಮಣಿಪಾಲದ ಸಾಯಿಸಾಗರ್ ಹೋಟೆಲ್ ಮುಂಭಾಗದ ಯು-ಟರ್ನ್ ರಸ್ತೆಯ ಬಳಿ ತಲುಪಿದಾಗ, ಮಣಿಪಾಲದ ಎಂಐಟಿ ಕಡೆಯಿಂದ ಬಂದ ಕಾರೊಂದು ಸ್ಕೂಟಿಗೆ ಡಿಕ್ಕಿ ಹೊಡೆದಿದೆ.
ಅಪಘಾತಕ್ಕೆ ಕಾರಣನಾದ ಕಾರು ಚಾಲಕ ಸಮೇಗ್ದ್ ಎಲ್.ಜೆ. (25), ಮುಡಾರು, ಕಾರ್ಕಳ ನಿವಾಸಿಯಾಗಿದ್ದು, ಮದ್ಯಪಾನ ಮಾಡಿದ ಸ್ಥಿತಿಯಲ್ಲಿ KA-19 ME-8833 ಸಂಖ್ಯೆಯ ಕಾರನ್ನು ಅಜಾಗರೂಕತೆಯಿಂದ ಚಲಾಯಿಸಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಡಿಕ್ಕಿಯ ಪರಿಣಾಮ ಅಭಿಷೇಕ್ ನಾಯಕ್ ಅವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಎರಡೂ ವಾಹನಗಳು ಜಖಂಗೊಂಡಿವೆ.
ಘಟನೆ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 99/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 281, 125(ಎ) ಹಾಗೂ 110ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಈ ಪ್ರಕರಣದ ಸಂಬಂಧ ಜೂನ್ 22ರಂದು ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು





