ಆಗುಂಬೆ ಘಾಟಿ: ಭಾರಿ ವಾಹನಗಳ ಸಂಚಾರ ನಿಷೇಧ

ಉಡುಪಿ ಜೂ.25 : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಸಂಚಾರದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ಣಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ)(2) & (5) ರನ್ವಯ ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ ಮೂಲಕ ಸೆಪ್ಟಂಬರ್ 30 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ.

ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ-ನಗರ-ಕುಂದಾಪುರ ಹಾಗೂ ಉಡುಪಿ ಮಾರ್ಗವಾಗಿ ಮತ್ತು ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬರುವ ಭಾರಿ ವಾಹನಗಳು ಬಾಳೆಹೊನ್ನೂರು-ಮಾಗುಂಡಿ-ಕಳಸ-ಕುದುರೆಮುಖ-ಎಸ್.ಕೆ ಬಾರ್ಡರ್ ಮಾರ್ಗವಾಗಿ ಸಂಚರಿಸ ಬೇಕು. ನರಸಿಂಹರಾಜಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕೊಪ್ಪ-ಜಯಪುರ-ಬಾಳೆಹೊಳೆ-ಕಳಸ-ಕುದುರೆಮುಖ-ಎಸ್.ಕೆ ಬಾರ್ಡರ್ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!