ವಾಹನಗಳ ತಪಾಸಣೆ ನಡೆಸುತ್ತಿದ್ದ ಹೆಡ್ ಕಾನ್ಸ್ಟೇಬಲ್ಗೆ ತಲವಾರು ದಾಳಿ
ಮಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಮೇಲೆ ಹಾಡುಹಗಲೇ ದುಷ್ಕರ್ಮಿಯೋರ್ವ ತಲವಾರಿನಿಂದ ದಾಳಿ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬಂದರ್ ಠಾಣೆಯ ಹೆಡ್ಕಾನ್ಸ್ಟೇಬಲ್ ಗಣೇಶ ಕಾಮತ್ ತಲವಾರು ದಾಳಿಗೊಳಗಾದವರು. ಘಟನೆಯಿಂದ ಗಣೇಶ್ ಅವರ ಕೈಗೆ ಬಲವಾದ ಏಟು ಬಿದ್ದಿದ್ದು, ಕೂಡಲೇ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಿನ ರಥಬೀದಿ ಸಮೀಪದ ಚಿತ್ರಮಂದಿರವೊ0ದರ ಬಳಿ ಹೆಡ್ಕಾನ್ಸ್ಟೇಬಲ್ ಗಣೇಶ ಇಬ್ಬರು ಸಿಬ್ಬಂದಿ ಜೊತೆ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬೈಕಿನಲ್ಲಿ ಬಂದ ಅಪರಿಚಿತ ದುಷ್ಕರ್ಮಿಯೋರ್ವ ಮುಖ್ಯ ಪೇದೆ ಗಣೇಶ ಕಾಮತ್ರಿಗೆ ತಲವಾರಿನಿಂದ ಹಲ್ಲೆಗೈದಿದ್ದಾನೆ. ಈ ಬಗ್ಗೆ ಮಾಹಿತಿ ತಿಳಿದ ಮಂಗಳೂರು ಉತ್ತರ (ಬಂದರ್) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ .