ಮಂಗಳೂರು: ರೆಡ್ ಅಲರ್ಟ್ ಘೋಷಣೆ- ಜು.02(ನಾಳೆ) ಶಾಲಾ ಕಾಲೇಜ್‌ಗೆ ರಜೆ ಘೋಷಣೆ
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜುಲೈ 2 (ನಾಳೆ) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ (12ನೇ ತರಗತಿಯವರೆಗೆ) ರಜೆ ಘೋಷಿಸಲಾಗಿದೆ.
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಈ ಕುರಿತು ಆದೇಶ ಹೊರಡಿಸಿದ್ದು, ನಿರಂತರ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ.





