ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ

ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಮೇ.1ರಂದು ರಾಷ್ಟ್ರೀಯ ವೈದ್ಯರ ದಿನದ ಅಂಗವಾಗಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ.ಎಚ್.ಅಶೋಕ್, ರಾಷ್ಟ್ರೀಯ ಲೆಕ್ಕ ಪರಿಶೋಧಕರ ದಿನದ ಅಂಗವಾಗಿ ಹಿರಿಯ ಲೆಕ್ಕ ಪರಿಶೋಧಕರಾದ ಯು.ಬಿ ಅಜಿತ್ ಕುಮಾರ್, ಪತ್ರಿಕಾ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ ಕುರ್ಯ ಹಾಗೂ ರಾಷ್ಟ್ರೀಯ ಅಂಚೆ ಕಾರ್ಮಿಕರ ದಿನದ ಅಂಗವಾಗಿ ಅಂಚೆ ಪೇದೆಯಾದ ನಾಗರಾಜ್ ಶೆಟ್ಟಿಗಾರ್ ಅವರನ್ನು ಗುರುತಿಸಿ ಸಮಾಜಕ್ಕೆ ಅವರ ಕೊಡುಗೆಯನ್ನು ಸ್ಮರಿಸಿ ಅವರಿಗೆ ಶಾಲು ಹೊದಿಸಿ, ಹೂಮಾಲೆ ಹಾಕಿ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಸುಬ್ರಹ್ಮಣ್ಯ ಜಿ ಕುರ್ಯ ಅವರು ಮಾತನಾಡಿ ಕಳೆದ 3 ದಶಕದಿಂದ ಪತ್ರಿಕೋದ್ಯಮದಲ್ಲಿ ಪಕ್ಷಾತೀತವಾಗಿ, ದ್ವೇಷದ ಮನೋಭಾವವನ್ನು ಇಟ್ಟುಕೊಳ್ಳದೇ ಕಾರ್ಯನಿರ್ವಹಿಸಿದ ತೃಪ್ತಿ ನನಗಿದೆ. ಪತ್ರಕರ್ತರರು ವರದಿಗಾರಿಕೆಯ ಜವಾಬ್ದಾರಿಯೊಂದಿಗೆ ಸಾಮಾಜಿಕ ಕಳಕಳಿಯನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿ ಸಾಮಾಜಿಕ ಜಾಲತಾಣದ ಭರಾಟೆಯ ನಡುವೆಯೂ ದಾಖಲೆಯುಕ್ತ ಪ್ರಬುದ್ಧ ವರದಿಗಾರಿಕೆಯ ಮೂಲಕ ಪತ್ರಿಕೋದ್ಯಮವು ತನ್ನ ಮಹತ್ವವನ್ನು ಉಳಿಸಿಕೊಳ್ಳಲು ಸಾಧ್ಯವಿದೆ ಎಂದು ತಿಳಿಸಿ ಪತ್ರಿಕಾ ದಿನಾಚರಣೆಯಂದು ತನಗೆ ಗೌರವಿಸಿದಕ್ಕಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಸೇರಿದಂತೆ ಉಪಸ್ಥಿತರಿದ್ದ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಾದ ಚಂದ್ರಮೋಹನ್ ಚಿಟ್ಪಾಡಿ, ಸತೀಶ್ ಪುತ್ರನ್, ಗಣೇಶ್ ನೆರ್ಗಿ, ಸತೀಶ್ ಕೊಡವೂರು, ಯುವರಾಜ್ ಪುತ್ತೂರು, ಸಂಧ್ಯಾ ತಿಲಕ್‌ರಾಜ್, ಮಮತಾ ಶೆಟ್ಟಿ, ಭರತ್ ಕುಮಾರ್, ಸಂಜಯ್ ಆಚಾರ್ಯ, ಲಕ್ಷ್ಮೀಶ್ ಶೆಟ್ಟಿ, ಲ್ಯಾನ್ಸಿ ಡಿ’ಸೋಜಾ, ಯಾದವ್ ಆಚಾರ್ಯ, ಅರ್ಚನಾ ದೇವಾಡಿಗ ಹಾಗೂ ಉದ್ಯಮಿ ಸಚಿನ್ ಅವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!