ಮಲ್ಪೆಯ ಉದ್ಯಮಿ ಸಂದೀಪ್ ಸಾಲ್ಯಾನ್ ಸಂಶಯಾಸ್ಪದ ಮೃತ್ಯು- ಕೊಲೆ ಪ್ರಕರಣ ದಾಖಲು- ಮಹಿಳೆಯ ಬಂಧನ?
Screenshot
ಉಡುಪಿ: ಮಲ್ಪೆಯ ಉದ್ಯಮಿ ಸಂದೀಪ್ ಸಾಲ್ಯಾನ್ ಸಾವಿನ ಪ್ರಕರಣದ ಪ್ರಮುಖ ಆರೋಪಿ ಮಹಿಳೆಯನ್ನು ಕ್ಯಾಲಂಗಟ್ ಪೊಲೀಸರು ಇಂದು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮಹಿಳೆ ಮೂಲತಃ ಮಂಗಳೂರು ನಿವಾಸಿ ಅಕ್ಷತಾ ಎಂದು ಗುರುತಿಸಲಾಗಿದೆ. ಆಕೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಳು ಎನ್ನಲಾಗಿದೆ.
ಸಂದೀಪ್ ಸಾವಿನ ಪ್ರಕರಣ ಈಗ ಕೊಲೆ ಎಂದು ಪೊಲೀಸರು ಸಾಬೀತು ಪಡಿಸಿದ್ದಾರೆ. ಮಹಿಳೆ ರೆಸಾರ್ಟ್ ನಲ್ಲಿ ಕಟ್ಟರ್ ಕೇಳಿ ಸಂದೀಪ್ ಬಳಿ ಇದ್ದ ಚಿನ್ನ ಹಾಗೂ ಹಣವನ್ನು ದೋಚಿಕೊಂಡು ಹೋಗಿದ್ದಳು. ಇದರಿಂದ ಅನುಮಾನಗೊಂಡ ಪೊಲೀಸರು ಈ ಆರೋಪಿ ಮಹಿಳೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪೊಲೀಸರು ಆರೋಪಿ ಮಹಿಳೆಯನ್ನು ಬಂದಿಸಿ ಈಗ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ವಿಚಾರಣೆಯಲ್ಲಿ ಸಂದೀಪ್ ಕೊಲೆಯ ಸತ್ಯಾಂಶ ತಿಳಿದುಬರಬೇಕಿದೆ.





