ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ: ಮಂಕಿ ಠಾಣಾ ಪಿಎಸ್‌ಐ ಬಂಧನ

ಭಟ್ಕಳ: ಯಲ್ಲಾಪುರ ಮೂಲದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಭಟ್ಕಳ ತಾಲೂಕಿನ ಮಂಕಿ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ (ಪಿಎಸ್‌ಐ) ಅಭಿನಂದನ್ ಗೌಡ ಅವರನ್ನು ಭಟ್ಕಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಪ್ರಾಪ್ತ ಬಾಲಕಿಯು ನೀಡಿದ ದೂರಿನ ಮೇರೆಗೆ ಭಟ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ದಾಖಲಾದ ಬಳಿಕ ಪೊಲೀಸರು ಆರೋಪಿ ಪಿಎಸ್‌ಐಯನ್ನು ವಶಕ್ಕೆ ಪಡೆದು ನ್ಯಾಯಾಂಗದ ಮುಂದೆ ಹಾಜರುಪಡಿಸಿದ್ದಾರೆ.

ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಘಟನೆಯು ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದ್ದು, ಪ್ರಕರಣದ ಬಗ್ಗೆ ಸಾರ್ವಜನಿಕ ವಲಯದಲ್ಲಿಯೂ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

Leave a Reply

Your email address will not be published. Required fields are marked *

error: Content is protected !!