ಆಯುಷ್ಮಾನ್ ರೆಫರಲ್ ಪದ್ಧತಿ ಬಗ್ಗೆ ಮಾಹಿತಿ ಕೊರತೆ: ಜಯಪ್ರಕಾಶ್ ಹೆಗ್ಡೆ
ಉಡುಪಿ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಲಾನುಭವಿಗಳು ತುರ್ತುಚಿಕಿತ್ಸೆ ಹೊರತುಪಡಿಸಿ ನೇರವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವಂತಿಲ್ಲ. ಸರ್ಕಾರಿ ಆಸ್ಪತ್ರೆಯಲ್ಲಿ ಶಿಾರಸ್ಸು ಪತ್ರದ ಮೂಲಕ ಮಾತ್ರವೇ ಖಾಸಗಿ ಆಸ್ಪತ್ರೆಗಳಲ್ಲಿ ಜನರಲ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯಬಹುದು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.
ಆದರ್ಶ ಚಾರಿಟೆಬಲ್ ಟ್ರಸ್ಟ್, ಆದರ್ಶ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂದ ಆಶ್ರಯದಲ್ಲಿ ಆದರ್ಶ ಆಸ್ಪತ್ರೆಯಲ್ಲಿ ನಡೆದ ವೈದ್ಯರ ದಿನಾಚರಣೆ, ಸನ್ಮಾನ, ವೈದ್ಯಕಿಯ ತಪಾಸಣಾ ಉಚಿತ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಅನೇಕ ರೋಗಿಗಳಿಗೆ ಈ ಬಗ್ಗೆ ಮಾಹಿತಿ ಕೊರತೆ ಇದೆ. ಹೀಗಾಗಿ ಆಸ್ಪತ್ರೆಯಲ್ಲಿ ಪೂರ್ತಿ ಚಿಕಿತ್ಸೆ ಪಡೆದ ಬಳಿಕ ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಸಹಾಯ ಯಾಚಿಸುತ್ತಾರೆ. ನಿಯಮಮೀರಿ ಏನೂ ಮಾಡಲು ಸಾಧ್ಯವಾಗುವುದಿಲ್ಲ. ತೀರಾ ಅಗತ್ಯ ಸಂದರ್ಭದಲ್ಲಿ ಸರ್ಕಾರಿ ವೈದ್ಯರೇ ಖಾಸಗಿ ಅಸ್ಪತ್ರೆಗೆ ದಾಖಲಾದ ರೋಗಿಯನ್ನು ಭೇಟಿ ಮಾಡಿ ರೆರಲ್ ನೀಡಲು ಅನುಕೂಲವಾಗುವಂತೆ ನಿಯಮಗಳನ್ನು ಸರಳೀಕರಣ ಮಾಡಲು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.
ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸವರಾಜ ಹುಬ್ಬಳಿ, ಉಡುಪಿ ಜಿಲ್ಲಾ ಸರ್ಜನ್ ಡಾ.ಎಚ್.ಅಶೋಕ್, ಐಎಂಎ ಅಧ್ಯಕ್ಷ ಡಾ. ಅಶೋಕ್ ಕುಮಾರ್, ನಿವೃತ್ತ ಪೊಲೀಸ್ ಅಧಿಕಾರಿಗಳ ಸಂದ ಉಪಾಧ್ಯಕ್ಷ ವೆಲೆಂಟೈನ್ ಡಿಸೋಜಾ, ಹೃದ್ರೋಗ ತಜ್ಞ ಡಾ. ಸುಹಾಸ್, ಆಸ್ಪತ್ರೆ ಸಿಇಒ ವಿಮಲಾ ಚಂದ್ರಶೇಖರ್ ಉಪಸ್ಥಿತರಿದ್ದರು. ಆಸ್ಪತ್ರೆ ಆಡಳಿತ ನಿರ್ದೇಶಕ ಡಾ. ಜಿ.ಎಸ್. ಚಂದ್ರಶೇಖರ್ ಸ್ವಾಗತಿಸಿದರು. ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.
ವೈದ್ಯರಿಗೆ ಸನ್ಮಾನ
ಆದರ್ಶ ಆಸ್ಪತ್ರೆಯ ಮೂಳೆ ಮತ್ತು ಕೀಲು ರೋಗ ತಜ್ಞ ಡಾ.ಮೋಹನ್ದಾಸ್ ಶೆಟ್ಟಿ, ಕಾರ್ಕಳ ಸಿಟಿ ನರ್ಸಿಂಗ್ ಹೋಂನ ಮೂಳೆ ಮತ್ತು ಕೀಲುರೋಗ ತಜ್ಞ ಡಾ.ರಿಜ್ವಾನ್ ಅಹಮದ್, ಹೊನ್ನಾವರದ ಸೇಂಟ್ ಇಗ್ನೇಶಿಯಸ್ ಆಸ್ಪತ್ರೆ ವೈದ್ಯಕಿಯ ತಜ್ಞ ಡಾ.ಆಶಿಕ್ ಕುಮಾರ್ ಹೆಗ್ಡೆ, ಕರ್ಜೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಸವಿತಾ ಕುಂದರ್, ಬಜಗೋಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಗಿರೀಶ್ ಗೌಡ ಅವರನ್ನು ಸನ್ಮಾನಿಸಲಾಯಿತು.
ಆರೋಗ್ಯ ಶಿಬಿರ
ಶಿಬಿರದಲ್ಲಿ ತಜ್ಞ ವೈದ್ಯರಿಂದ ಆರೋಗ್ಯ ತಪಾಸಣೆ, ರಕ್ತದ ಸಂಪೂರ್ಣ ಪರೀಕ್ಷೆ(ಸಿಬಿಸಿ), ರಕ್ತದ ಸಕ್ಕರೆ ಪರೀಕ್ಷೆ(ಆರ್ಬಿಎಸ್), ಕೊಲೆಸ್ಟ್ರಾಲ್ ಪರೀಕ್ಷೆ, ಇಸಿಜಿ ಸೇರಿದಂತೆ ವಿವಿಧ ಆರೋಗ್ಯ ಪರೀಕ್ಷೆಗಳನ್ನು ಉಚಿತವಾಗಿ ನಡೆಸಲಾಯಿತು.
ಖಾಸಗಿ ಸಂಸ್ಥೆಗಳು ಮತ್ತು ಸರ್ಕಾರಿ ಇಲಾಖೆಗಳು ಪರಸ್ಪರ ಕೈಜೋಡಿಸಿದಾಗ ಸಮಾಜಕ್ಕೆ ಉತ್ತಮ ಸೇವೆ ನೀಡಲು ಸಾಧ್ಯ. ವೈದ್ಯರು ಭೂಮಿಯಲ್ಲಿರುವ ದೇವರ ಕೈಗಳು ಎಂಬ ಭಾವನೆ ಇದೆ. ಬೇರೆ ಬೇರೆ ಇಲಾಖೆಗಳಲ್ಲಿ ಆಯಾ ವಿಭಾಗ ಮುಖ್ಯಸ್ಥರು ಇಲ್ಲದಿದ್ದಾಗ ಮತ್ತೊಬ್ಬರು ಮುನ್ನಡೆಸಬಹುದು. ಆದರೆ ವೈದ್ಯರನ್ನು ಹೊರತುಪಡಿಸಿ ಬೇರೆ ಯಾರೂ ಈ ವೃತ್ತಿಯನ್ನು ಕೈಗೊಳ್ಳಲು ಸಾಧ್ಯವಿಲ್ಲ. ಹೀಗಾಗಿ ವೈದ್ಯರಿಗೆ ತಮ್ಮ ಕರ್ತವ್ಯವನ್ನು ಚೆನ್ನಾಗಿ ನಡೆಸಲು ಕಾನೂನಿನ ಪರಿರಕ್ಷಣೆಯೂ ಇದೆ.— ಹರಿರಾಮ್ ಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ





