ಗ್ರಾ.ಪಂ. ಚುನಾವಣೆ ಅಂದರೆ ಪ್ರಜಾಪ್ರಭುತ್ವದ ಹಬ್ಬ: ಪ್ರಮೋದ್ ಮಧ್ವರಾಜ್

ಉಡುಪಿ: ಕಾಂಗ್ರೆಸ್ ಭವನದಲ್ಲಿ ಜರಗಿದ ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಪಂಚಾಯತ್‌ಗಳ ಪಕ್ಷದ ಬೆಂಬಲಿತ ಅಭ್ಯರ್ಥಿಗಳ ಹಾಗೂ ವೀಕ್ಷಕರ ಸಭೆಯಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್‌ರವರು ಮಾತನಾಡುತ್ತಾ ಗ್ರಾಮ ಪಂಚಾಯತ್ ಚುನಾವಣೆ ಅಂದರೆ ಪ್ರಜಾಪ್ರಭುತ್ವದ ಹಬ್ಬ. ದೀಪಾವಳಿ, ಕ್ರಿಸ್ಮಸ್, ರಮ್ಜಾನ್ ಹಬ್ಬದಂತೆ ಚುನಾವಣೆಯಲ್ಲಿ ಸ್ಪರ್ಧೆ ಮುಖ್ಯ. ಸೋಲು ಗೆಲುವು ನಮ್ಮ ಹಣೆಯಲ್ಲಿ ಬರೆದಂತಾಗುತ್ತದೆ.

ಶ್ರೀಕೃಷ್ಣ ಭಗವತ್ ಗೀತೆಯಲ್ಲಿ ಹೀಗೆ ಹೇಳುತ್ತಾರೆ ಪ್ರಯತ್ನ ನಿಮ್ಮದು ಫಲ ನೀಡುವುದು ತಾನು ಎಂದು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿರುವುದು ಸಂತೋಷ ತಂದಿದೆ ಎಂದು ಶುಭ ಹಾರೈಸಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ. ಕುಶಲ್ ಶೆಟ್ಟಿಯವರು ಮಾತನಾಡುತ್ತಾ ಕೇಂದ್ರ ರಾಜ್ಯ ಸರಕಾರಗಳು ರೈತರ ಮರಣಶಾಸನವಾದ ಭೂಮಸೂದೆ ತಿದ್ದುಪಡಿ ಕಾನೂನು, ಕೃಷಿ ಉತ್ಪನ್ನ ಮಾರುಕಟ್ಟೆ (ಎ.ಪಿ.ಎಂ.ಸಿ.) ತಿದ್ದುಪಡಿ ಕಾನೂನು ಕಾರ್ಮಿಕರ ತಿದ್ದುಪಡಿ ಕಾನೂನನ್ನು ತರಾತುರಿಯಲ್ಲಿ ಜಾರಿಗೊಳಿಸುವ ಮೂಲಕ ಜನವಿರೋಧಿಯಾಗಿದೆ ಎಂದರು.

ಬ್ಲಾಕ್ ಅಧ್ಯಕ್ಷರಾದ ಸತೀಶ್ ಅಮೀನ್ ಪಡುಕೆರೆಯವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿ ಮುರಳಿ ಶೆಟ್ಟಿ, ರಾಜ್ಯ ಹಿಂದುಳಿದ ವರ್ಗ ಘಟಕದ ಕಾರ್ಯದರ್ಶಿ ಯತೀಶ್ ಕರ್ಕೇರ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ. ನರಸಿಂಹ ಮೂರ್ತಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರಾದ ದಿನೇಶ್ ಪುತ್ರನ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕೀರ್ತಿ ಶೆಟ್ಟಿ, ಬ್ಲಾಕ್ ಎಸ್.ಸಿ. ಘಟಕದ ಅಧ್ಯಕ್ಷರಾದ ಗಣೇಶ್ ನೆರ್ಗಿ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಿಕಾ ಶೆಟ್ಟಿ, ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ವಿಜಯ ಪೂಜಾರಿ ಬೈಲೂರು, ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು. ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

error: Content is protected !!