ಜು.19: ಉಡುಪಿ ಪ್ರಸಾದ್ ನೇತ್ರಾಲಯದಲ್ಲಿ ಲಾಸಿಕ್, ಸ್ಮೈಲ್, ಪಿಆರ್‌ಕೆ ಕಣ್ಣಿನ ಉಚಿತ ತಪಾಸಣಾ ಶಿಬಿರ
ಉಡುಪಿ: ನಗರದ ಹೆಸರಾಂತ ಕಣ್ಣಿನ ಆಸ್ಪತ್ರೆಯಾದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಉಡುಪಿ ಕೇಂದ್ರದಲ್ಲಿ ಲಾಸಿಕ್ ಲೇಸರ್ ಕಣ್ಣಿನ ಉಚಿತ ತಪಾಸಣಾ ಶಿಬಿರವು ಜುಲೈ 19 ಭಾನುವಾರದಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ವರೆಗೆ ನಡೆಯಲಿದೆ.
ಕನ್ನಡಕ ಮತ್ತು ಕಾಂಟ್ಯಾಕ್ಟ್ ಲೆನ್ಸ್ ಉಪಯೋಗಿಸುತ್ತಿರುವ ಅರ್ಹ 18 ರಿಂದ 40 ವರ್ಷ ಪ್ರಾಯದವರಿಗೆ ಮಾಡಬಹುದಾದ ಈ ಅತ್ಯಾಧುನಿಕ ಲೇಸರ್ ಚಿಕಿತ್ಸೆಯಿಂದ ಕನ್ನಡಕ ಮತ್ತು ಕಾಂಟ್ಯಾಕ್ಟ್ ಲೆನ್ಸ್ ನಿಂದ ಮುಕ್ತಿ ಹೊಂದಬಹುದಲ್ಲದೆ, ಈ ಚಿಕಿತ್ಸೆಯಿಂದ ಪರಿಶುದ್ಧವಾದ ದೃಷ್ಟಿಯನ್ನು ಪಡೆಯಬಹುದು. ಚಿಕಿತ್ಸೆ ನಂತರ ಕೂಡಲೇ ರೋಗಿಯು ತನ್ನೆಲ್ಲ ಸಾಮಾನ್ಯ ದೈನಂದಿನ ಚಟುವಟಿಕೆಗಳನ್ನು ಮಾಡಬಹುದು ಈ ಚಿಕಿತ್ಸೆಯಿಂದ ಯಾವುದೇ ನೋವು ಉಂಟಾಗುವುದಿಲ್ಲ.
ಈ ಶಿಬಿರದಲ್ಲಿ ದೃಷ್ಟಿ ಪರೀಕ್ಷೆ, ಕಣ್ಣಿನ ನರ ಪರೀಕ್ಷೆ, ಟೋಪೋಗ್ರಾಫಿ ಸ್ಕ್ಯಾನ್ (ಶಸ್ತ್ರಚಿಕಿತ್ಸೆಗೆ ಮೊದಲು ಮಾಡುವ ಪರೀಕ್ಷೆ) ಮೊದಲಾದವುಗಳನ್ನು ಉಚಿತವಾಗಿ ಮಾಡಲಾಗುವುದು .ಚಿಕಿತ್ಸೆಗೆ ಅರ್ಹವಾದ ರೋಗಿಗಳಿಗೆ ಲಾಸಿಕ್ ಲೇಸರ್ ರಿಯಾಯಿತಿ ದರದಲ್ಲಿ ನಡೆಸಲಾಗುವುದು.
ಹೆಚ್ಚಿನ ವಿವರಗಳಿಗೆ 9482863095, 8792882134 ಈ ನಂಬರ್ ಅನ್ನು ಸಂಪರ್ಕಿಸಬಹುದು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.





