ಬಿ.ಸಿ.ರೋಡ್‌ನಲ್ಲಿ ಯುವತಿಯ ಭೀಕರ ಹತ್ಯೆ
ಮಂಗಳೂರು: ಯುವತಿಯೋರ್ವಳನ್ನು ಮಾರಕಾಸ್ತ್ರದಿಂದ ದಾಳಿ ನಡೆಸಿ ಹತ್ಯೆ ನಡೆಸಿದ ಘಟನೆ ಬಿ.ಸಿ.ರೋಡ್ KSRTC ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದಿದೆ.
ಕಕ್ಯಪದವು ನಿವಾಸಿ ಲಾವಣ್ಯ ಮೃತ ಯುವತಿ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಭೇಟಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್ಪಿ, ಯುವತಿಯೊಬ್ಬಳು ಬಸ್ ಗೆ ಕಾಯುತ್ತಿದ್ದಾಗ ಯಾರೋ ಒಬ್ಬ ಯುವಕ ಬಂದು ಚಾಕುವಿನಿಂದ ಹಲ್ಲೆ ನಡೆಸಿರುವ ಬಗ್ಗೆ ಮಾಹಿತಿ ಬಂದಿದೆ. ತಕ್ಷಣ ಇಲ್ಲಿದ್ದವರು ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಹಿನ್ನಲೆ ವಿಶೇಷ ತಂಡಗಳನ್ನು ನೇಮಿಸಿ ಆರೋಪಿಯನ್ನು ಪತ್ತೆ ಹಚ್ಚುವ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.





