ಉಡುಪಿಯಲ್ಲಿ ಜು.31-ಆ.2 ವರೆಗೆ ‘ಸ್ವದೇಶಿ ಖಾದ್ಯ ಮೇಳ’ಕ್ಕೆ ಭರದ ಸಿದ್ಧತೆ

ಉಡುಪಿ: “ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ – ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ” ಎಂಬ ಧ್ಯೇಯದೊಂದಿಗೆ ಸಮಾಜ ಸೇವಕ, ಕಾಂಗ್ರೆಸ್ ಮುಖಂಡ, ಅನೇಕ ದೈವ-ದೇವಸ್ಥಾನಗಳ ಜೀರ್ಣೋದ್ಧಾರದ ರೂವಾರಿಗಳೂ, ಕನ್ನರ್ಪಾಡಿ ಜಯದುರ್ಗ ಪರಮೇಶ್ವರಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಅವರ ಸಾರಥ್ಯದಲ್ಲಿ ಜು.31 ರಿಂದ ಆ.2 ವರೆಗೆ “ಸ್ವದೇಶಿ ಖಾದ್ಯ ಮೇಳ” ನಡೆಯಲಿದೆ.

ಮೇಳವು ಜುಲೈ 31, ಆಗಸ್ಟ್ 1 ಮತ್ತು 2 ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಬೆಳಿಗ್ಗೆ 10ರಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿದೆ.

ಆಯೋಜಕರು ನೀಡಿರುವ ಮಾಹಿತಿಯಂತೆ, ಮೇಳದಲ್ಲಿ ಸ್ವದೇಶಿ ತಿಂಡಿ-ತಿನಿಸುಗಳು, ಕರಕುಶಲ ವಸ್ತುಗಳು, ಫ್ಯಾನ್ಸಿ ವಸ್ತುಗಳು, ಗೃಹೋಪಯೋಗಿ ಸಾಮಗ್ರಿಗಳು, ಮಸಾಲೆ ಪದಾರ್ಥಗಳು ಹಾಗೂ ಇತರೆ ಸ್ವದೇಶಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.

ಮೂರು ದಿನಗಳ ಕಾಲ ನಡೆಯಲಿರುವ ಈ ಮೇಳದಲ್ಲಿ ಸಾವಿರಾರು ಮಂದಿ ಭೇಟಿ ನೀಡುವ ನಿರೀಕ್ಷೆಯಿದ್ದು, ಸ್ಥಳೀಯ ಉದ್ಯಮಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ಪರಿಚಯಿಸಿ ವ್ಯಾಪಾರ ವಿಸ್ತರಿಸಿಕೊಳ್ಳಲು ಉತ್ತಮ ವೇದಿಕೆಯಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಸ್ಟಾಲ್ ಬುಕ್ಕಿಂಗ್ ಹಾಗೂ ಹೆಚ್ಚಿನ ಮಾಹಿತಿಗಾಗಿ 80734 97446 ಅಥವಾ 63668 61816 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *

error: Content is protected !!