ಮಂತ್ರಾಲಯ: ಭೀಕರ ಕಾರು ಅಪಘಾತ- ಯಕ್ಷಧ್ರುವ ಪಟ್ಲ ಫೌಂಡೇಶನ್ ಜೊತೆ ಕಾರ್ಯದರ್ಶಿ ಸ್ಥಳದಲ್ಲೇ ಮೃತ್ಯು, ಮೂವರಿಗೆ ಗಾಯ

ರಾಯಚೂರು: ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಇಂದು ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿಶೆಟ್ಟಿ (43) ಸಾವನಪ್ಪಿದ್ದಾರೆ.

ಮಂತ್ರಾಲಯ ರವಿ ಶೆಟ್ಟಿ ತಮ್ಮ ಸ್ನೇಹಿತರೊಂದಿಗೆ ರಾಘವೇಂದ್ರ ಸ್ವಾಮಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅವರ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ರವಿ ಶೆಟ್ಟಿಯವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಮಂಗಳೂರಿನ ಪ್ರದೀಪ್ ಆಳ್ವ ಪುರುಷೋತ್ತಮ ಭಂಡಾರಿ, ಸಿಎ ಸುಧೇಶ್ ರೈ ಎಂದು ಗುರುತಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಕಾರ, ರವಿಶೆಟ್ಟಿ ತಮ್ಮ ಸ್ನೇಹಿತರೊಂದಿಗೆ ರಾಘವೇಂದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲು ಮಂತ್ರಾಲಯಕ್ಕೆ ಹೊರಟಿದ್ದರು. ಅವರು ಪ್ರಯಾಣಿಸುತ್ತಿದ್ದ ಕಾರು ಮಂತ್ರಾಲಯದ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ರವಿಶೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇತರ ಮೂವರು ಕುಟುಂಬ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!