ಶಾಲಾ ಬಸ್ ಮೇಲೆ ಮರ ಬಿದ್ದು ವಿದ್ಯಾರ್ಥಿನಿ ಮೃತ್ಯು; ಹಲವು ಮಂದಿಗೆ ಗಾಯ

ತರಗತಿ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಶಾಲಾ ಬಸ್‌ವೊಂದರ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಘಟನೆ ಬಂಟ್ವಾಳದ ಮಾಣಿ – ಬರಿಮಾರು ರಸ್ತೆಯ ಕಲ್ಲೆಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ನಡೆದಿದೆ.

ಘಟನೆಯಲ್ಲಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.

ಗಾಯಾಳು ವಿದ್ಯಾರ್ಥಿಗಳನ್ನು ಸ್ಥಳೀಯರ ನೆರವಿನಿಂದ ಪುತ್ತೂರು ಹಾಗೂ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್‌ನೊಳಗಿದ್ದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರತೆಗೆದರು. ಘಟನೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ಬಸ್ ಇದಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಘಟನೆಯ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಮೃತ ಹಾಗೂ ಗಾಯಾಳುಗಳ ಸಂಖ್ಯೆ ಮತ್ತು ಅವರ ಆರೋಗ್ಯ ಸ್ಥಿತಿಯ ಕುರಿತು ಪೊಲೀಸ್ ಇಲಾಖೆಯಿಂದ ಅಧಿಕೃತ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *

error: Content is protected !!