ಇಂದೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ? ಸಿಜೆಪಿ ಮತ್ತು ಕೇಂದ್ರ ಸರ್ಕಾರದ ನಡುವೆ ಮಹತ್ವದ ಮಾತುಕತೆ

ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಒತ್ತಾಯಿಸಿ ಕಾಕ್ರೋಚ್ ಜನತಾ​ ಪಾರ್ಟಿ(ಸಿಜೆಪಿ) ಹಾಗೂ ಶಿಕ್ಷಣತಜ್ಞ ಮತ್ತು ಪರಿಸರವಾದಿ ಸೋನಮ್ ವಾಂಗ್ಚೂಕ್‌ ಅವರ ಹೋರಾಟಕ್ಕೆ ಕೇಂದ್ರ ಸರ್ಕಾರ ಮಣಿದಂತೆ ಕಾಣುತ್ತಿದೆ.

ಶಿಕ್ಷಣ ವ್ಯವಸ್ಥೆಯ ಸುಧಾರಣೆ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮಗಳಿಗೆ ಹೊಣೆಗಾರಿಕೆ ನಿಗದಿಪಡಿಸುವುದು, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮದ ಬಗ್ಗೆ ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದ ನಂತರ ಸೋನಮ್ ವಾಂಗ್ಚೂಕ್‌ ಅವರು ತಮ್ಮ 26 ದಿನಗಳ ಉಪವಾಸ ಅಂತ್ಯಗೊಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!