ಉಡುಪಿ: ಇನ್ಸ್ಟಾಗ್ರಾಮ್ ನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್- ಯುವಕನೊರ್ವನ ಮೇಲೆ ದೂರು ದಾಖಲು!
ಉಡುಪಿ: (ಉಡುಪಿ ಟೈಮ್ಸ್ ವರದಿ)ಇನ್ಸ್ಟಾಗ್ರಾಮ್ ನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿರುವ ಆರೋಪದ ಮೇಲೆ ಸೈಬರ್ ಪೊಲೀಸರು ಯುವಕನೊರ್ವನ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ.
ಆರೋಪಿ ಮರವಂತೆಯ ಜಯರಾಮ ಎನ್ನುವಾತ ತನ್ನ ಮೊಬೈಲ್ ನ್ನು ಬಳಸಿ, 2019 ನ.5ರಂದು ಹಲವಾರು ಬಾರಿ ಮಕ್ಕಳ ಅಶ್ಲೀಲ ವಿಡಿಯೋವನ್ನು ಅಪ್ಲೋಡ್ ಮಾಡಿ, ಶಿಕ್ಷಾರ್ಹ ಅಪರಾಧವೆಸಗಿರುವುದು ಕಂಡು ಬಂದಿರುವುದರಿಂದ ಉಡುಪಿ ಸೆನ್ ಅಪರಾಧ ಪೊಲೀಸ್ ನಿರೀಕ್ಷಕ, ರಾಮಚಂದ್ರ ನಾಯಕ್ ಇವರು ಆತನ ವಿರುದ್ದ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.