2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ ಘೋಷಣೆ

ಮಂಡ್ಯ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಕೆ.ಆರ್‌.ಪೇಟೆಯಲ್ಲಿ ದಿ.ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ರಾಜಕೀಯ ನಿವೃತ್ತಿ ಬಗ್ಗೆ ಹೇಳಿಕೆ ನೀಡಿದ್ದಾರೆ.

ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದು, ಜನರ ಕಷ್ಟ, ಸುಖಗಳಿಗೆ ಧ್ವನಿಯಾಗಿ ನಿಲ್ಲುತ್ತೇನೆ ಎಂದು ಹೇಳಿದರು.

ಮತ್ತೊಮ್ಮೆ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ವರುಣ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಆದರೆ ನಾನು ಇನ್ನು ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಅಂದುಕೊಂಡಿದ್ದೇನೆ. ಈ ಹಿಂದೆ ರಾಜಕೀಯವಾಗಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡುಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ, ಇಂದು ಅಂತಹ ಪರಿಸ್ಥಿತಿ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಮೇ 28 ರಂದು ರಾಜೀನಾಮೆ ಸಲ್ಲಿಸಿದ್ದರು. ಆ ಮೂಲಕ ಕರ್ನಾಟಕದಲ್ಲಿ ಸುದೀರ್ಘ ಮುಖ್ಯಮಂತ್ರಿ ಎಂಬ ದಾಖಲೆ ಬರೆದು, ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿದ್ದರು.

Leave a Reply

Your email address will not be published. Required fields are marked *

error: Content is protected !!